AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ ಜಿಲ್ಲೆಯಲ್ಲಿ ಮಳೆ ಆರ್ಭಟ: ಲಕ್ಷ್ಮೇಶ್ವರ ಪಟ್ಟಣದ ರಸ್ತೆಗಳು ಜಲಾವೃತ

ಗದಗ ಜಿಲ್ಲೆಯಲ್ಲಿ ಮಳೆ ಆರ್ಭಟ: ಲಕ್ಷ್ಮೇಶ್ವರ ಪಟ್ಟಣದ ರಸ್ತೆಗಳು ಜಲಾವೃತ

ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: May 18, 2026 | 9:34 AM

Share

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಭಾರೀ ಮಳೆಯ ಆರ್ಭಟ ಮುಂದುವರಿದಿದೆ. ಧಾರಾಕಾರ ಮಳೆಗೆ ಕೆಂಚಲಾಪುರ ಓಣಿ ಮತ್ತು ಬನಶಂಕರಿ ದೇಗುಲ ರಸ್ತೆಗಳು ಸಂಪೂರ್ಣವಾಗಿ ಜಲಾವೃತಗೊಂಡಿವೆ. ಮಳೆಯ ಜೊತೆಗೆ ಗಾಳಿಯ ವೇಗ ಹೆಚ್ಚಾಗಿದ್ದರಿಂದ ಹಲವೆಡೆ ಮರಗಳು ನೆಲಕ್ಕುರುಳಿವೆ. ಇದರಿಂದ ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗಿದೆ. ವಿಡಿಯೋ ಇಲ್ಲಿದೆ ನೋಡಿ.

ಗದಗ, ಮೇ 18: ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು, ಭಾನುವಾರ ಸಂಜೆ ಸುರಿದ ವರ್ಷಧಾರೆಗೆ ಹಲವು ಅವಾಂತರಗಳಾಗಿವೆ. ಧಾರಾಕಾರ ಮಳೆಗೆ ಪಟ್ಟಣದ ರಸ್ತೆಗಳು ಸಂಪೂರ್ಣವಾಗಿ ಜಲಾವೃತಗೊಂಡಿವೆ. ಕೆಂಚಲಾಪುರ ಓಣಿ ಮತ್ತು ಬನಶಂಕರಿ ದೇಗುಲ ರಸ್ತೆಗಳಲ್ಲಿ ಮೊಣಕಾಲ ಮಟ್ಟದ ನೀರು ನಿಂತಿದ್ದು, ವಾಹನ ಸಂಚಾರಕ್ಕೆ ತೀವ್ರ ಅಡಚಣೆಯುಂಟಾಗಿದೆ. ಮಳೆಯ ಜೊತೆಗೆ ಬೀಸಿದ ಭಾರೀ ಗಾಳಿಗೆ ಹಲವೆಡೆ ಮರಗಳು ನೆಲಕ್ಕುರುಳಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sanjeev Pandre
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More