ಪಾವಗಡದಲ್ಲಿ ವರುಣಾರ್ಭಟ: ಟಿ.ಎನ್. ಪೇಟೆ ಗ್ರಾಮದಲ್ಲಿ ಬೃಹತ್ ಮರ ಧರೆಗುರುಳಿ ಸಂಚಾರಕ್ಕೆ ಅಡಚಣೆ
ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನಲ್ಲಿ ಸುರಿದ ಧಾರಾಕಾರ ಮಳೆಗೆ ಟಿ.ಎನ್.ಪೇಟೆ ಗ್ರಾಮದಲ್ಲಿ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಧರೆಗುರುಳಿದೆ. ಇದರಿಂದ ವಾಹನ ಸಂಚಾರಕ್ಕೆ ಅಡಚಣೆಯಾಗಿದ್ದು, ವಾಹನ ಸವಾರರು ಪರದಾಡಿದ್ದಾರೆ. ತಕ್ಷಣವೇ ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಮರವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಯಾವುದೇ ರೀತಿಯ ಅನಾಹುತ ಸಂಭವಿಸಿಲ್ಲ ಎನ್ನುವುದು ಸಮಾಧಾನಕರ ಸಂಗತಿ.
ತುಮಕೂರು, ಅಕ್ಟೋಬರ್ 06: ರಾತ್ರಿ ಸುರಿದ ಧಾರಕಾರ ಮಳೆಗೆ ತುಮಕೂರು ಜಿಲ್ಲೆಯ ಪಾವಗಡದ ಟಿ.ಎನ್.ಪೇಟೆ ಗ್ರಾಮದಲ್ಲಿ ಸ್ತೆಗೆ ಬೃಹತ್ ಮರ ಧರೆಗುರುಳಿದ ಘಟನೆ ನಡೆದಿದೆ. ಪರಿಣಾಮ ವಾಹನ ಸವಾರರು ಪರದಾಟ ನಡೆಸಿದ್ದು, ಕೂಡಲೇ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ ಅಧಿಕಾರಿಗಳು ಮರವನ್ನ ತೆರವುಗೊಳಿಸಿ, ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಅದೃಷ್ಟವಶಾತ್ ಮರ ಬೀಳುವ ವೇಳೆ ಸ್ಥಳದಲ್ಲಿ ಯಾವುದೇ ವಾಹನ ಸಂಚರಿಸುತ್ತಿರಲಿಲ್ಲದ ಕಾರಣ ಸಂಭವನೀಯ ಅನಾಹುತ ತಪ್ಪಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos

