ಉಡುಪಿಯಲ್ಲಿ ಅಬ್ಬರಿಸಿದ ವರುಣ: ಮಣಿಪಾಲ ರಸ್ತೆಯಲ್ಲಿ ನೀರು ನಿಂತು ಸವಾರರ ಪರದಾಟ
ಬಿಸಿಲಿನಿಂದ ತತ್ತರಿಸಿದ್ದ ಉಡುಪಿ ಜನರಿಗೆ ವರುಣ ತಂಪೆರೆದಿದ್ದಾನೆ. ಏಕಾಏಕಿ ಸುರಿದ ಮಳೆಗೆ ಮಣಿಪಾಲ ರಸ್ತೆಯಲ್ಲಿ ನೀರು ನಿಂತು ಹಳ್ಳದಂತೆ ಹರಿದಿದ್ದು, ವಾಹನ ಸವಾರರು ಪರದಾಡಿದ ಪ್ರಸಂಗ ನಡೆದಿದೆ. ನಗರದ ಕಲ್ಸಂಕ ಜಂಕ್ಷನ್ ಬಳಿ ರಸ್ತೆಯಲ್ಲಿಯೇ ನೀರು ನಿಂತ ಪರಿಣಾಮ ವಾಹನಗಳ ಸುಗಮ ಸಂಚಾರಕ್ಕೆ ಕೆಲ ಕಾಲ ತೊಂದರೆಯಾಗಿದೆ. ಮುಂಜಾನೆಯಿಂದಲೆ ಜಿಲ್ಲೆಯ ಹಲವು ಕಡೆ ಮಳೆಯಾಗಿದೆ.
ಉಡುಪಿ, ಮೇ 07: ಬಿಸಿಲಿನ ತಾಪಕ್ಕೆ ತೀವ್ರವಾಗಿ ತತ್ತರಿಸಿದ್ದ ಪೊಡವಿಗೊಡೆಯನ ನಾಡು ಉಡುಪಿಯ ಜನಕ್ಕೆ ವರುಣ ತಂಪೆರೆದಿದ್ದಾನೆ. ಮುಂಜಾನೆಯಿಂದಲೆ ಜಿಲ್ಲೆಯ ಹಲವು ಕಡೆ ಮಳೆಯಾಗಿದ್ದು, ಏಕಾಏಕಿ ಸುರಿದ ಮಳೆಗೆ ವಾಹನ ಸವಾರರು ಪರದಾಟ ನಡೆಸಿರುವ ಪ್ರಸಂಗ ನಡೆದಿದೆ. ಉಡುಪಿ ನಗರದಲ್ಲಿಯೂ ಉತ್ತಮ ಮಳೆಯಾದ ಪರಿಣಾಮ ಮಣಿಪಾಲ ರಸ್ತೆಯ ಕೆಲವೆಡೆ ರಸ್ತೆಯಲ್ಲಿಯೇ ಹಳ್ಳದ ರೀತಿ ನೀರು ಹರಿದಿರುವ ದೃಶ್ಯಗಳು ಕಂಡುಬಂದಿವೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್:FSL ವರದಿಯನ್ನೇ ತಿರುಚಿದ ಗ್ಯಾಂಗ್!

