ಉಡುಪಿಯಲ್ಲಿ ಅಬ್ಬರಿಸಿದ ವರುಣ: ಮಣಿಪಾಲ ರಸ್ತೆಯಲ್ಲಿ ನೀರು ನಿಂತು ಸವಾರರ ಪರದಾಟ

Edited By:

Updated on: May 07, 2026 | 6:27 PM

ಬಿಸಿಲಿನಿಂದ ತತ್ತರಿಸಿದ್ದ ಉಡುಪಿ ಜನರಿಗೆ ವರುಣ ತಂಪೆರೆದಿದ್ದಾನೆ. ಏಕಾಏಕಿ ಸುರಿದ ಮಳೆಗೆ ಮಣಿಪಾಲ ರಸ್ತೆಯಲ್ಲಿ ನೀರು ನಿಂತು ಹಳ್ಳದಂತೆ ಹರಿದಿದ್ದು, ವಾಹನ ಸವಾರರು ಪರದಾಡಿದ ಪ್ರಸಂಗ ನಡೆದಿದೆ. ನಗರದ ಕಲ್ಸಂಕ ಜಂಕ್ಷನ್​​ ಬಳಿ ರಸ್ತೆಯಲ್ಲಿಯೇ ನೀರು ನಿಂತ ಪರಿಣಾಮ ವಾಹನಗಳ ಸುಗಮ ಸಂಚಾರಕ್ಕೆ ಕೆಲ ಕಾಲ ತೊಂದರೆಯಾಗಿದೆ. ಮುಂಜಾನೆಯಿಂದಲೆ ಜಿಲ್ಲೆಯ ಹಲವು ಕಡೆ ಮಳೆಯಾಗಿದೆ.

ಉಡುಪಿ, ಮೇ 07: ಬಿಸಿಲಿನ ತಾಪಕ್ಕೆ ತೀವ್ರವಾಗಿ ತತ್ತರಿಸಿದ್ದ ಪೊಡವಿಗೊಡೆಯನ ನಾಡು ಉಡುಪಿಯ ಜನಕ್ಕೆ ವರುಣ ತಂಪೆರೆದಿದ್ದಾನೆ. ಮುಂಜಾನೆಯಿಂದಲೆ ಜಿಲ್ಲೆಯ ಹಲವು ಕಡೆ ಮಳೆಯಾಗಿದ್ದು, ಏಕಾಏಕಿ ಸುರಿದ ಮಳೆಗೆ ವಾಹನ ಸವಾರರು ಪರದಾಟ ನಡೆಸಿರುವ ಪ್ರಸಂಗ ನಡೆದಿದೆ. ಉಡುಪಿ ನಗರದಲ್ಲಿಯೂ ಉತ್ತಮ ಮಳೆಯಾದ ಪರಿಣಾಮ ಮಣಿಪಾಲ ರಸ್ತೆಯ ಕೆಲವೆಡೆ ರಸ್ತೆಯಲ್ಲಿಯೇ ಹಳ್ಳದ ರೀತಿ ನೀರು ಹರಿದಿರುವ ದೃಶ್ಯಗಳು ಕಂಡುಬಂದಿವೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಪ್ರಜ್ವಲ್ ಅಮೀನ್​, ಉಡುಪಿ

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More