ಅರಬ್ಬೀ ಸಮುದ್ರದಲ್ಲಿ ಆಗಿರುವ ವಾಯುಭಾರ ಕುಸಿತದಿಂದ ರಾಜ್ಯಾದ್ಯಂತ ಮೇ 28ರವರೆಗೆ ಭಾರೀ ಮಳೆ: ಹವಾಮಾನ ಇಲಾಖೆ
ಬೆಳಗಾವಿ, ಉತ್ತರ ಕನ್ನಡ, ಕೊಡಗು ಜಿಲ್ಲೆಗಳಲ್ಲಿ ನಿನ್ನೆ ಭಾರೀ ಮಳೆಯಾಗಿದೆ ಎಂದು ಪಾಟೀಲ್ ಹೇಳಿದರು. ವಾಯುಭಾರ ಕುಸಿತದಿಂದಾಗಿ ಉತ್ತರ ಕರ್ನಾಕದ ಜಿಲ್ಲೆಗಳಾಗಿರುವ ಕಲ್ಬುರ್ಗಿ, ರಾಯಚೂರು, ಬೀದರ್, ಯಾದಗಿರಿ, ಬಳ್ಳಾರಿ ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದ ಅವರು ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಅಂತ ಹೇಳಿದರು.
ಬೆಂಗಳೂರು, ಮೇ 24: ಅರಬ್ಬೀ ಸಮುದ್ರದ ಪೂರ್ವಭಾಗ ಗೋವಾ ಮತ್ತು ಕರಾವಳಿ ಪ್ರಾಂತ್ಯದಲ್ಲಿ ವಾಯುಭಾರ ಕುಸಿತ ಉಂಟಾಗಲಿರುವುದರಿಂದ ಇಂದಿನಿಂದ ಮೇ 28ರವರಗೆ ರಾಜ್ಯದಾದ್ಯಂತ ಧಾರಾಕಾರವಾಗಿ ಮಳೆಯಾಗಲಿದೆಯೆಂದು ಹವಾಮಾನ ಇಲಾಖೆಯ ವಿಜ್ಞಾನಿ ಸಿಎಸ್ ಪಾಟೀಲ್ (CS Patil) ಹೇಳಿದರು. ಆವರು ಹೇಳುವ ಪ್ರಕಾರ ಡಿಪ್ರೆಶನ್ನಿಂದಾಗಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಮತ್ತು ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಹಾಗೆಯೇ, ಬೆಳಗಾವಿ, ಧಾರವಾಡ, ಹಾವೇರಿ, ಹಾಸನ ಹಾಗೂ ಚಾಮರಾಜನಗರಗಳಲ್ಲೂ ಧಾರಾಕಾರವಾಗಿ ಮಳೆ ಸುರಿಯಲಿದೆ, ಈ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಎಂದು ಪಾಟೀಲ್ ಹೇಳಿದರು.
ಇದನ್ನೂ ಓದಿ: Monsoon 2025: ಭಾರತದಲ್ಲಿ ಈ ವರ್ಷ ಸಾಮಾನ್ಯಕ್ಕಿಂತ ಹೆಚ್ಚು ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ
ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ