ಪಶ್ಚಿಮ ಘಟ್ಟದಲ್ಲಿ ಮುಂದುವರಿದ ಮಳೆಯ ಅಬ್ಬರ; ನರಸಿಂಹವಾಡಿ ದತ್ತ ಮಂದಿರ ಜಲಾವೃತ!

Updated on: Jul 07, 2026 | 11:22 AM

ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಅಬ್ಬರ ಮುಂದುವರಿದಿದೆ. ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕೃಷ್ಣಾ ನದಿ ಮತ್ತು ಪಂಚಗಂಗಾ ನದಿಗಳು ಉಕ್ಕಿ ಹರಿಯುತ್ತಿವೆ. ಇದರ ಪರಿಣಾಮವಾಗಿ, ಕೊಲ್ಹಾಪುರ ಜಿಲ್ಲೆಯ ಶಿರೋಳ ತಾಲೂಕಿನಲ್ಲಿರುವ ಪ್ರಸಿದ್ಧ ನರಸಿಂಹವಾಡಿ ದತ್ತ ಮಂದಿರವು ಸಂಪೂರ್ಣವಾಗಿ ಜಲಾವೃತಗೊಂಡಿದೆ.

ಬೆಳಗಾವಿ, ಜುಲೈ 07: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಅಬ್ಬರ ಮುಂದುವರಿದಿದೆ. ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕೃಷ್ಣಾ ನದಿ ಮತ್ತು ಪಂಚಗಂಗಾ ನದಿಗಳು ಉಕ್ಕಿ ಹರಿಯುತ್ತಿವೆ. ಇದರ ಪರಿಣಾಮವಾಗಿ, ಕೊಲ್ಹಾಪುರ ಜಿಲ್ಲೆಯ ಶಿರೋಳ ತಾಲೂಕಿನಲ್ಲಿರುವ ಪ್ರಸಿದ್ಧ ನರಸಿಂಹವಾಡಿ ದತ್ತ ಮಂದಿರವು ಜಲಾವೃತಗೊಂಡಿದೆ.

ನರಸಿಂಹವಾಡಿ ದತ್ತ ಮಂದಿರವು ಕೃಷ್ಣಾ ಮತ್ತು ಪಂಚಗಂಗಾ ನದಿಗಳ ಸಂಗಮ ಸ್ಥಳದಲ್ಲಿದೆ. ಪ್ರಸ್ತುತ, ದೇವಸ್ಥಾನದ ಬಹುಭಾಗವು ನೀರಿನಿಂದ ಆವೃತವಾಗಿದ್ದು, ದೇವಸ್ಥಾನದೊಳಗೆ ನೀರು ನುಗ್ಗಿದೆ. ಭಕ್ತರು ನೀರಿನ ಮಧ್ಯದಲ್ಲೇ ನಿಂತು ದೇವರ ದರ್ಶನ ಪಡೆಯುತ್ತಿದ್ದಾರೆ. ಈ ಪರಿಸ್ಥಿತಿಯ ನಡುವೆಯೂ ಭಕ್ತರ ಸಂಖ್ಯೆ ಕಡಿಮೆಯಾಗಿಲ್ಲ.

ಸ್ಥಳೀಯ ಅಧಿಕಾರಿಗಳ ಪ್ರಕಾರ, ಮಳೆಯ ಪ್ರಮಾಣ ಹೆಚ್ಚಾದರೆ ಯಾವುದೇ ಕ್ಷಣದಲ್ಲಿ ದೇವಸ್ಥಾನವು ಸಂಪೂರ್ಣವಾಗಿ ಮುಳುಗಡೆಯಾಗುವ ಸಾಧ್ಯತೆಯಿದೆ. ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದ್ದು, ಭಕ್ತರು ಮತ್ತು ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Jul 07, 2026 10:50 AM
Follow Us