Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ
Uduapi Rains: ಉಡುಪಿಯಲ್ಲಿ ಕಳೆದ ಮೂರು ಗಂಟೆಗಳಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಇದರಿಂದ ಉಡುಪಿ-ಮಣಿಪಾಲ ರಸ್ತೆಯಲ್ಲಿ ಪ್ರವಾಹದಂತೆ ಕೆಸರು, ಕಲ್ಲುಗಳ ರಾಶಿ ಹರಿಯುತ್ತಿದ್ದ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ವಾಹನ ಸವಾರರು ಪರ್ಯಾಯ ಮಾರ್ಗ ಬಳಸಿ ಮಣಿಪಾಲಕ್ಕೆ ತೆರಳುತ್ತಿದ್ದಾರೆ. ನೀರಿನ ರಭಸಕ್ಕೆ ರಸ್ತೆಯಲ್ಲಿದ್ದ ಕೆಸರು, ಕಲ್ಲುಗಳ ರಾಶಿ ಕೊಚ್ಚಿಕೊಂಡು ಹೋಗುತ್ತಿರುವ ವಿಡಿಯೋ ಫುಲ್ ವೈರಲ್ ಆಗಿದೆ. ಇದರಿಂದ ವಾಹನ ಸವಾರರು ಹೈರಾಣಾಗಿದ್ದಾರೆ.
ಉಡುಪಿ, (ಮೇ 20): ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಇನ್ನು ಬಿರುಸಿನ ಮಳೆಯಿಂದಾಗಿ (Udupi Rains) ಉಡುಪಿ-ಮಣಿಪಾಲ ರಸ್ತೆಯಲ್ಲಿ ಮಂಗಳವಾರ ಕೃತಕ ಪ್ರವಾಹ ಸೃಷ್ಟಿಯಾಗಿದ್ದು, ನೀರಿನ ರಭಸಕ್ಕೆ ರಸ್ತೆಯಲ್ಲಿದ್ದ ಕೆಸರು, ಕಲ್ಲುಗಳ ರಾಶಿ ಕೊಚ್ಚಿಕೊಂಡು ಹೋಗುತ್ತಿರುವ ವಿಡಿಯೋ ಫುಲ್ ವೈರಲ್ ಆಗಿದೆ. ಇದರಿಂದ ವಾಹನ ಸವಾರರು ಹೈರಾಣಾಗಿದ್ದಾರೆ. ಮಣಿಪಾಲದ ಐನಾಕ್ಸ್ ಬಳಿಯ ರಸ್ತೆ ಸಂಪೂರ್ಣವಾಗಿ ಮುಳುಗಿ, ನದಿಯಂತೆ ನೀರು ಹರಿದಿದ್ದು, ಕೆಸರು ನೀರಿನ ಜತೆಗೆ ಕಲ್ಲು ಮಣ್ಣು ರಸ್ತೆ ಮೇಲೆ ಹರಿದಿದೆ. ಉಡುಪಿಯ ಪ್ರಮುಖ ರಸ್ತೆಯಾಗಿರುವ ಇಲ್ಲಿ ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಮಳೆ ನೀರು ರಸ್ತೆ ಮೇಲೆ ಹರಿದಿದೆ ಎಂದು ಹೇಳಲಾಗಿದೆ.
Latest Videos

