ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ: ವಾಹನಗಳ ಸಂಚಾರಕ್ಕಿಲ್ಲ ತೊಂದರೆ
ಮುಖ್ಯಾಂಶಗಳು
- ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ
- ಶಿರಾಡಿಘಾಟ್ ವ್ಯಾಪ್ತಿಯ ಕಪ್ಪಳ್ಳಿ ಬಳಿ ನಡೆದ ಭೂಕುಸಿತ
- ಕೂಡಲೇ ಮಣ್ಣು ತೆರವು, ವಾಹನಗಳ ಸಂಚಾರಕ್ಕಿಲ್ಲ ಸಮಸ್ಯೆ
Hassan Rain: ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಮುಂದುವರಿದಿದ್ದು, ಸಕಲೇಶಪುರ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ನಡುವೆ ಶಿರಾಡಿ ಘಾಟ್‌ನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಪ್ಪಳ್ಳಿ ಬಳಿ ಭೂಕುಸಿತ ಸಂಭವಿಸಿದೆ. ಜೆಸಿಬಿ ಬಳಸಿ ಮಣ್ಣು ತೆರವುಗೊಳಿಸಲಾಗುತ್ತಿದ್ದು, ಚತುಷ್ಪಥ ರಸ್ತೆ ಕಾಮಗಾರಿಯಿಂದಾಗಿ ಗುಡ್ಡ ಕುಸಿದರೂ ಸಂಚಾರಕ್ಕೆ ತೊಂದರೆಯಾಗದಂತೆ ಜಿಲ್ಲಾಡಳಿತ ವ್ಯವಸ್ಥೆ ಮಾಡಿದೆ.
ಹಾಸನ, ಜುಲೈ 07: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಆರ್ಭಟ ಮುಂದುವರಿದಿದ್ದು, ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಶಿರಾಡಿಘಾಟ್ ವ್ಯಾಪ್ತಿಯ ಕಪ್ಪಳ್ಳಿ ಬಳಿ ಭೂಕುಸಿತ ಉಂಟಾಗಿದೆ. ಸಕಲೇಶಪುರದಿಂದ ಮಂಗಳೂರು ಕಡೆ ತೆರಳುವ ಮಾರ್ಗದಲ್ಲಿ ಘಟನೆ ನಡೆದಿದ್ದು, ತಕ್ಷಣ ಜೆಸಿಬಿ ಬಳಸಿ ಸಿಬ್ಬಂದಿ ಮಣ್ಣು ತೆರವುಗೊಳಿಸುವ ಕಾರ್ಯ ಮಾಡಿದ್ದಾರೆ. ಈ ಬಾರಿ ಗುಡ್ಡ ಕುಸಿದರೂ ಸಂಚಾರಕ್ಕೆ ಸಮಸ್ಯೆ ಆಗದಂತೆ ವ್ಯವಸ್ಥೆ ಮಾಡಲಾಗಿದ್ದು, ಶಿರಾಡಿಘಾಟ್‌ನಲ್ಲಿ ಭೂಕುಸಿತ ಸಾಧ್ಯತೆ ಸ್ಥಳಗಳನ್ನು ಜಿಲ್ಲಾಡಳಿತ ಗುರುತಿಸಿದೆ. ಅಲ್ಲದೆ ಸಣ್ಣ ಪ್ರಮಾಣದಲ್ಲಿ ಮಣ್ಣು ಕುಸಿದರೂ ಅವನ್ನು ಸಿಬ್ಬಂದಿ ತಕ್ಷಣ ತೆರವುಗೊಳಿಸ್ತಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Jul 07, 2026 03:07 PM
Follow Us
