AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!

ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!

ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Sep 30, 2026 | 11:37 AM

Share

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕೌದಳ್ಳಿ ಬಳಿ ತಡರಾತ್ರಿ ಸುರಿದ ಭಾರಿ ಮಳೆಗೆ ಸೇತುವೆಯ ಡಾಂಬರು ಭಾಗ ಕೊಚ್ಚಿ ಹೋಗಿದೆ. ಕೊಳ್ಳೇಗಾಲ-ಮಲೆಮಹದೇಶ್ವರ ಬೆಟ್ಟಕ್ಕೆ ತೆರಳುವ ಮಾರ್ಗದಲ್ಲಿ ಈ ಅವಘಡ ಸಂಭವಿಸಿದ್ದು, ಭಕ್ತರು ಮತ್ತು ಯಾತ್ರಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ರಸ್ತೆಯಲ್ಲಿ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ಚಾಮರಾಜನಗರ, ಸೆಪ್ಟೆಂಬರ್ 30: ಜಿಲ್ಲೆಯಲ್ಲಿ ತಡರಾತ್ರಿ ಸುರಿದ ಭಾರೀ ಮಳೆಯಿಂದಾಗಿ ವ್ಯಾಪಕ ಅವಾಂತರ ಸೃಷ್ಟಿಯಾಗಿದೆ. ಹನೂರು ತಾಲೂಕಿನ ಕೌದಳ್ಳಿ ಬಳಿ ಇರುವ ಸೇತುವೆಯೊಂದು ಮಳೆ ರಭಸಕ್ಕೆ ಭಾಗಶಃ ಕೊಚ್ಚಿ ಹೋಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಕೊಳ್ಳೇಗಾಲದಿಂದ ಮಲೆಮಹದೇಶ್ವರ ಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ಮಾರ್ಗದಲ್ಲಿ ಈ ದುರ್ಘಟನೆ ಸಂಭವಿಸಿದೆ. ಸೇತುವೆಯ ಮೇಲಿದ್ದ ಡಾಂಬರು ಸಂಪೂರ್ಣವಾಗಿ ಕೊಚ್ಚಿ ಹೋಗಿದ್ದು, ಸೇತುವೆಯ ಕೆಳಭಾಗದ ರಚನೆ ಕೂಡಾ ಹಾನಿಗೊಳಗಾಗಿದೆ. ಇದರಿಂದಾಗಿ ಮಾದಪ್ಪನ ಬೆಟ್ಟಕ್ಕೆ ತೆರಳುತ್ತಿದ್ದ ಭಕ್ತರು, ಯಾತ್ರಾರ್ಥಿಗಳು ಮತ್ತು ಸ್ಥಳೀಯ ಜನರು ಪರದಾಡುವಂತಾಗಿದೆ.

ಭಾರಿ ಮಳೆಯಿಂದಾಗಿ ರಸ್ತೆಯುದ್ದಕ್ಕೂ ನೀರು ನಿಂತು, ಮಾರ್ಗ ಮಧ್ಯದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಸೇತುವೆ ಹಾನಿಗೊಳಗಾದ ಕಾರಣ ವಾಹನ ದಟ್ಟಣೆ ಉಂಟಾಗಿದ್ದು, ಹಲವಾರು ವಾಹನಗಳು ರಸ್ತೆಯಲ್ಲೇ ನಿಂತುಬಿಟ್ಟಿವೆ. ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸೇತುವೆ ದುರಸ್ತಿಗಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸೂರಜ್ ಪ್ರಸಾದ್ ಎಸ್.ಎನ್
ಸೂರಜ್ ಪ್ರಸಾದ್ ಎಸ್.ಎನ್

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More