ಶಬರಿಮಲೆಯಲ್ಲಿ ಭಕ್ತ ಸಾಗರ: ಮಾಲಾಧಾರಿಗಳ ಪರದಾಟ, ನೀಲಕ್ಕಲ್ ಸುತ್ತಮುತ್ತ ಟ್ರಾಫಿಕ್ ಜಾಮ್
ಶಬರಿಮಲೆ ಅಯ್ಯಪ್ಪ ಸನ್ನಿಧಿಗೆ ಭಕ್ತಸಾಗರವೇ ಹರಿದುಬರ್ತಿದ್ದು , ದರ್ಶನಕ್ಕೆ 14 ಗಂಟೆಗಳ ಕಾಲ ಸರತಿ ಸಾಲಿನಲ್ಲಿ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಮೂಲಸೌಕರ್ಯಗಳ ಕೊರತೆ, ಜನಸಂದಣಿ ಹೆಚ್ಚಳದಿಂದ ಭಕ್ತರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ನೀಲಕ್ಕಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರಿ ಸಂಚಾರ ದಟ್ಟಣೆ ಉಂಟಾಗಿದ್ದು, ವಾಹನ ನಿಲುಗಡೆಗೆ ಸಹ ಸ್ಥಳಾವಕಾಶದ ಸಮಸ್ಯೆ ಎದುರಾಗಿದೆ. ಭಕ್ತರು ಆನ್‌ಲೈನ್‌ನಲ್ಲಿ ಟಿಕೆಟ್ ಬುಕ್ ಮಾಡುವಂತೆ ಸೂಚಿಸಲಾಗಿದೆ.
ಕೇರಳ, ನವೆಂಬರ್ 19: ಶಬರಿಮಲೆ ಅಯ್ಯಪ್ಪ ಸನ್ನಿಧಿಗೆ ಭಕ್ತಸಾಗರವೇ ಹರಿದುಬರ್ತಿದ್ದು, ದರ್ಶನಕ್ಕಾಗಿ 14 ಗಂಟೆಗಳ ಕಾಲ ಸರತಿ ಸಾಲಿನಲ್ಲಿ ನಿಲ್ಲುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಅಯ್ಯಪ್ಪನ ಸನ್ನಿಧಿಯಲ್ಲಿ 2 ಲಕ್ಷಕ್ಕೂ ಹೆಚ್ಚು ಭಕ್ತರು ನೆರೆದಿದ್ದು, ಪ್ರತಿ ದಿನ 1 ಲಕ್ಷ ಭಕ್ತರಿಗೆ ಮಾತ್ರ ದರ್ಶನಕ್ಕೆ ಅವಕಾಶವಿದೆ. ಪಂಪಾದಿಂದ ದೇಗುಲದ ಮಾರ್ಗದುದ್ದಕ್ಕೂ ಕಿಕ್ಕಿರಿದು ಜನ ತುಂಬಿದ ಪರಿಣಾಮ, ಹೆಜ್ಜೆ ಇಡಲು ಜಾಗವಿಲ್ಲದಷ್ಟು ಜನಸಂದಣಿ ಉಂಟಾಗಿದೆ. ಭಕ್ತರ ಅತಿಯಾದ ಸಂಖ್ಯೆಯಿಂದಾಗಿ ದರ್ಶನಕ್ಕೆ ಬಂದ ಮಾಲಾಧಾರಿಗಳು, ವಿಶೇಷವಾಗಿ ಮಕ್ಕಳೊಂದಿಗೆ ಬಂದವರು ಪರದಾಡುತ್ತಿದ್ದಾರೆ. ಕುಡಿಯುವ ನೀರು, ಶೌಚಾಲಯ ಮತ್ತು ವಿಶ್ರಾಂತಿ ಗೃಹಗಳಂತಹ ಮೂಲಸೌಕರ್ಯಗಳ ಕೊರತೆಯ ಪರಿಸ್ಥಿತಿಯನ್ನು ಮತ್ತಷ್ಟು ಹದಗೆಡಿಸಿದೆ. ಸರತಿ ಸಾಲಿನಲ್ಲಿ ಉಂಟಾದ ನೂಕುನುಗ್ಗಲು ಮತ್ತು ಉಸಿರಾಟದ ಸಮಸ್ಯೆಯಿಂದಾಗಿ 58 ವರ್ಷದ ಮಹಿಳಾ ಭಕ್ತರೊಬ್ಬರು ಸಾವನ್ನಪ್ಪಿದ್ದಾರೆ. ನೀಲಕ್ಕಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರಿ ಸಂಚಾರ ದಟ್ಟಣೆ ಉಂಟಾಗಿದ್ದು, ವಾಹನ ನಿಲುಗಡೆಗೆ ಸಹ ಸ್ಥಳಾವಕಾಶದ ಸಮಸ್ಯೆ ಎದುರಾಗಿದೆ. ಭಕ್ತರು ಆನ್‌ಲೈನ್‌ನಲ್ಲಿ ಟಿಕೆಟ್ ಬುಕ್ ಮಾಡುವಂತೆ ಸೂಚಿಸಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.