ಪ್ರಮಾಣವಚನಕ್ಕೂ ಮುನ್ನವೇ ಡಿಕೆ ಶಿವಕುಮಾರ್ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಡಿಕೆ ಶಿವಕುಮಾರ್ ಆಯ್ಕೆಯಾದ ನಂತರ, ಭದ್ರತಾ ಕ್ರಮಗಳ ಭಾಗವಾಗಿ ಮೆಟಲ್ ಡಿಟೆಕ್ಟರ್‌ಗಳನ್ನು ಅಳವಡಿಸಲಾಗಿದೆ. ಮುಖ್ಯಮಂತ್ರಿ ಬದಲಾವಣೆ ಮತ್ತು ಅಧಿಕಾರ ಹಂಚಿಕೆ ಕುರಿತ ಚರ್ಚೆಗಳು ನಡೆಯುತ್ತಿರುವಾಗ ಈ ಭದ್ರತಾ ಏರ್ಪಾಡುಗಳನ್ನು ಮಾಡಲಾಗಿದೆ.
ಬೆಂಗಳೂರು, ಮೇ 30: ಕರ್ನಾಟಕದ ಮುಖ್ಯಮಂತ್ರಿ ಆಗಿ ಡಿ.ಕೆ.ಶಿವಕುಮಾರ್ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದು ನಡೆದ ಸಿಎಲ್ಪಿ ಸಭೆಯಲ್ಲಿ, ಅಧಿಕೃತವಾಗಿ ಡಿಕೆ ಶಿವಕುಮಾರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಆಗಿದ್ದಾರೆ. ಜೂನ್ 3 ರಂದು ಅಂದ್ರೆ ಬುಧವಾರ ಸಂಜೆ ಡಿಕೆ ಪದಗ್ರಹಣ ನಡೆಯಲಿದೆ. ಇನ್ನು ಡಿ.ಕೆ. ಶಿವಕುಮಾರ್ಗೆ ರಾಜ್ಯಪಾಲರು ಸರ್ಕಾರ ರಚಿಸಲು ಅಧಿಕೃತ ಆಹ್ವಾನ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಭದ್ರತಾ ದೃಷ್ಟಿಯಿಂದ ಬೆಂಗಳೂರಿನ ಸದಾಶಿವನಗರದಲ್ಲಿರುವ ನಿಯೋಜಿತ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ಭಾರೀ ಪೊಲೀಸ್ ಭದ್ರತೆಯನ್ನು ಕಲ್ಪಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಅವರ ನಿವಾಸದ ಮುಖ್ಯದ್ವಾರದಲ್ಲಿ ಪ್ರವೇಶಿಸುವವರಿಗಾಗಿ ಮೆಟಲ್ ಡಿಟೆಕ್ಟರ್‌ಗಳನ್ನು ಅಳವಡಿಸಲಾಗಿದ್ದು, ಪ್ರತಿಯೊಬ್ಬರನ್ನೂ ತಪಾಸಣೆ ಮಾಡಿಯೇ ಒಳಗೆ ಬಿಡಲಾಗುತ್ತಿದೆ.
ವರದಿ: ಈರಣ್ಣ ಬಸವ
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.


