IPL 2025: ಐಪಿಎಲ್ ಇತಿಹಾಸದಲ್ಲೇ ಮೂರನೇ ವೇಗದ ಶತಕ ಸಿಡಿಸಿದ ಹೆನ್ರಿಕ್ ಕ್ಲಾಸೆನ್
Heinrich Klaasen's Blazing IPL Century: ಹೆನ್ರಿಕ್ ಕ್ಲಾಸೆನ್ ಅವರು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಅದ್ಭುತ 37 ಎಸೆತಗಳ ಶತಕ ಬಾರಿಸಿದ್ದಾರೆ. ಇದು ಸನ್‌ರೈಸರ್ಸ್ ಹೈದರಾಬಾದ್‌ಗೆ ಈ ಸೀಸನ್‌ನಲ್ಲಿ ಮೂರನೇ ಶತಕವಾಗಿದೆ ಮತ್ತು ಕ್ಲಾಸೆನ್ ಅವರ ವೈಯಕ್ತಿಕ ದಾಖಲೆಯನ್ನು ಸಹ ಮುರಿದಿದೆ. ಅವರು 39 ಎಸೆತಗಳಲ್ಲಿ 9 ಸಿಕ್ಸರ್ ಮತ್ತು 7 ಬೌಂಡರಿಗಳ ಸಹಿತ ಅಜೇಯ 105 ರನ್ ಬಾರಿಸಿದರು.
ಹೆನ್ರಿಕ್ ಕ್ಲಾಸೆನ್ ಐಪಿಎಲ್ ಕೊನೆಯಲ್ಲಾದರೂ ಫಾರ್ಮ್ ಕಂಡು ಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಅದ್ಭುತ ಬ್ಯಾಟಿಂಗ್ ಮಾಡಿದ ಕ್ಲಾಸೆನ್, ಈ ಸೀಸನ್‌ನಲ್ಲಿ ಹೈದರಾಬಾದ್ ತಂಡದಿಂದ ಶತಕ ಸಿಡಿಸಿದ ಮೂರನೇ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ, ಕ್ಲಾಸೆನ್ ಕೇವಲ 37 ಎಸೆತಗಳಲ್ಲಿ ಬಿರುಗಾಳಿಯ ಶತಕ ಬಾರಿಸುವ ಮೂಲಕ ಇತಿಹಾಸ ಸೃಷ್ಟಿಸಿದರು. ಇದು ಐಪಿಎಲ್ ಇತಿಹಾಸದಲ್ಲಿ ಜಂಟಿಯಾಗಿ ಮೂರನೇ ಅತಿ ವೇಗದ ಶತಕವಾಗಿದೆ. ಇದು ಮಾತ್ರವಲ್ಲದೆ ಕ್ಲಾಸೆನ್ ತಮ್ಮದೇ ತಂಡದ ಸಹ ಆಟಗಾರ ಟ್ರಾವಿಸ್ ಹೆಡ್ ಅವರ ದಾಖಲೆಯನ್ನು ಸಹ ಮುರಿದರು.
ಮೇ 25, ಭಾನುವಾರ ನಡೆದ ಐಪಿಎಲ್ 2025 ರ 68 ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಮೊದಲು ಬ್ಯಾಟಿಂಗ್ ಮಾಡಿತು. ಸಾಮಾನ್ಯವಾಗಿ ನಾಲ್ಕು ಅಥವಾ ಐದನೇ ಕ್ರಮಾಂಕದಲ್ಲಿ ಬ್ಯಾಟಿಂಗ್ಗೆ ಬರುವ ಕ್ಲಾಸೆನ್, ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದರು. ಕೋಲ್ಕತ್ತಾದ ಸ್ಪಿನ್ ದಾಳಿಯನ್ನು ಸಮರ್ಥವಾಗಿ ಎದುರಿಸಿದ ಕ್ಲಾಸೆನ್ ಕೇವಲ 17 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ನಂತರ ಸ್ವಲ್ಪ ಸಮಯದೊಳಗೆ ಶತಕ ಪೂರೈಸಿದರು. 19 ನೇ ಓವರ್‌ನ ಕೊನೆಯ ಎಸೆತದಲ್ಲಿ 2 ರನ್‌ಗಳನ್ನು ತೆಗೆದುಕೊಳ್ಳುವ ಮೂಲಕ, ಕ್ಲಾಸೆನ್ ಕೇವಲ 37 ಎಸೆತಗಳಲ್ಲಿ ತಮ್ಮ ಶತಕವನ್ನು ಪೂರೈಸಿದರು. ಕ್ಲಾಸೆನ್ ಕೇವಲ 39 ಎಸೆತಗಳಲ್ಲಿ 9 ಸಿಕ್ಸರ್ ಮತ್ತು 7 ಬೌಂಡರಿಗಳ ಸಹಾಯದಿಂದ 105 ರನ್ ಗಳಿಸಿ ಅಜೇಯರಾಗುಳಿದರು.
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್

