ಕ್ರೀಡಾಕೂಟ ವೇಳೆ ಹೆಜ್ಜೇನು ದಾಳಿ: 40ಕ್ಕೂ ಹೆಚ್ಚು ಮಕ್ಕಳಿಗೆ ಗಾಯ, 8 ಮಕ್ಕಳು ಗಂಭಿರ
ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾ ಗ್ರಾಮದಲ್ಲಿ ಕಿತ್ತೂರು ಚನ್ನಮ್ಮ ವಸತಿ ಶಾಲೆಯ ಆವರಣದಲ್ಲಿ ನಡೆದಿದ್ದ ಪಟ್ಟಣ ಪಂಚಾಯ್ತಿ ಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ಕ್ರೀಡಾ ಕೂಟ ವೇಳೆ ಹೆಜ್ಜೇನು ದಾಳಿ ಮಾಡಿದ್ದು, 40ಕ್ಕೂ ಹೆಚ್ಚು ಮಕ್ಕಳಿಗೆ ಗಾಯಗಳಾಗಿದ್ದು, 8 ಮಕ್ಕಳು ಗಂಭಿರವಾಗಿದ್ದಾರೆ.
ಕೊಪ್ಪಳ, ಆಗಸ್ಟ್ 30: ಕ್ರೀಡಾಕೂಟ ವೇಳೆ ಹೆಜ್ಜೇನು (Hejjenu) ದಾಳಿಯಿಂದ 40ಕ್ಕೂ ಹೆಚ್ಚು ಮಕ್ಕಳಿಗೆ ಗಾಯಗಳಾಗಿರುವಂತಹ ಘಟನೆ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣದ ಕಿತ್ತೂರು ಚೆನ್ನಮ್ಮ ವಸತಿ ಶಾಲಾ ಆವರಣದಲ್ಲಿ ನಡೆದಿದೆ. 8 ಮಕ್ಕಳು ಗಂಭಿರವಾಗಿದ್ದು ತಾವರಗೇರಾ ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ತಾವರಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 7:28 pm, Fri, 30 August 24