ಕ್ರೀಡಾಕೂಟ ವೇಳೆ ಹೆಜ್ಜೇನು ದಾಳಿ: 40ಕ್ಕೂ ಹೆಚ್ಚು ಮಕ್ಕಳಿಗೆ ಗಾಯ, 8 ಮಕ್ಕಳು ಗಂಭಿರ

Edited By:

Updated on: Aug 30, 2024 | 8:24 PM

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾ ಗ್ರಾಮದಲ್ಲಿ ಕಿತ್ತೂರು ಚನ್ನಮ್ಮ ವಸತಿ ಶಾಲೆಯ ಆವರಣದಲ್ಲಿ ನಡೆದಿದ್ದ ಪಟ್ಟಣ ಪಂಚಾಯ್ತಿ ಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ಕ್ರೀಡಾ ಕೂಟ ವೇಳೆ ಹೆಜ್ಜೇನು ದಾಳಿ ಮಾಡಿದ್ದು, 40ಕ್ಕೂ ಹೆಚ್ಚು ಮಕ್ಕಳಿಗೆ ಗಾಯಗಳಾಗಿದ್ದು, 8 ಮಕ್ಕಳು ಗಂಭಿರವಾಗಿದ್ದಾರೆ.

ಕೊಪ್ಪಳ, ಆಗಸ್ಟ್​ 30: ಕ್ರೀಡಾಕೂಟ ವೇಳೆ ಹೆಜ್ಜೇನು (Hejjenu) ದಾಳಿಯಿಂದ 40ಕ್ಕೂ ಹೆಚ್ಚು ಮಕ್ಕಳಿಗೆ ಗಾಯಗಳಾಗಿರುವಂತಹ ಘಟನೆ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣದ ಕಿತ್ತೂರು ಚೆನ್ನಮ್ಮ ವಸತಿ ಶಾಲಾ ಆವರಣದಲ್ಲಿ ನಡೆದಿದೆ. 8 ಮಕ್ಕಳು ಗಂಭಿರವಾಗಿದ್ದು ತಾವರಗೇರಾ ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ತಾವರಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published on: Aug 30, 2024 07:28 PM
Loading...
Unable to load recommendations.
Follow Us
ಸಂಜಯ್ಯಾ ಚಿಕ್ಕಮಠ

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್​ನಿಂದ ಆರಂಭವಾದ ವೃತ್ತಿ ಬದುಕು, ಕಲಬುರಗಿ, ಕೊಪ್ಪಳದಿಂದ ಇದೀಗ ಹುಬ್ಬಳ್ಳಿಗೆ ಬಂದಿದ್ದು, ಉತ್ತರ ಕರ್ನಾಟಕ ಪ್ರಮುಖ ವಾಣಿಜ್ಯ ನಗರ ಹುಬ್ಬಳ್ಳಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More