ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ರನ್ನು ಸೋಲಿಸಲೇಬೇಕೆಂಬ ಹಟಕ್ಕೆ ಬಿದ್ದಿರುವ ರಮೇಶ್ ಜಾರಕಿಹೊಳಿಯ ಬಿಡುವಿಲ್ಲದ ಓಡಾಟ
ಈ ಕ್ಷೇತ್ರದಲ್ಲಿ ಮರಾಠಾ ಸಮುದಾಯದ ವೋಟುಗಳು ನಿರ್ಣಾಯಕ ಎಂದು ಹೇಳಲಾಗಿದ್ದು ಅವರ ಓಲೈಕೆಯಲ್ಲಿ ರಮೇಶ ತೊಡಗಿರುವುದನ್ನು ವಿಡಿಯೋದಲ್ಲಿ ನೋಡಬಹುದು.
ಬೆಳಗಾವಿ: ಮಾಜಿ ಸಚಿವ ರಮೇಶ ಜಾರಕಿಹೊಳಿ (Ramesh Jarkiholi) ಮತ್ತು ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ನಡುವಿನ ರಾಜಕೀಯ ಹಗೆತನ ಇಂದು ನಿನ್ನೆಯದಲ್ಲ. ಅವರಿಬ್ಬರು ಕಾಂಗ್ರೆಸ್ ಪಕ್ಷದಲ್ಲಿದ್ದಾಗಲೂ ಅವರ ನಡುವೆ ಎಣ್ಣೆ-ಸೀಗೇಕಾಯಿ ಸಂಬಂಧವಿತ್ತು. 2023 ರ ವಿಧಾನ ಸಭಾ ಚುನಾವಣೆಯಲ್ಲಿ ಲಕ್ಷ್ಮಿಯವರನ್ನು ಸೋಲಿಸಲೇಬೇಕೆಂಬ ಹಟಕ್ಕೆ ರಮೇಶ ಬಿದ್ದಿರುವಂತಿದೆ. ಈ ಕ್ಷೇತ್ರದಲ್ಲಿ ಮರಾಠಾ ಸಮುದಾಯದ (Maratha community) ವೋಟುಗಳು ನಿರ್ಣಾಯಕ ಎಂದು ಹೇಳಲಾಗಿದ್ದು ಅವರ ಓಲೈಕೆಯಲ್ಲಿ ರಮೇಶ ತೊಡಗಿರುವುದನ್ನು ವಿಡಿಯೋದಲ್ಲಿ ನೋಡಬಹುದು.
ಇನ್ನಷ್ಟು ವಿಡಿಯೋ ಸುದ್ದಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
Published on: Dec 05, 2022 12:01 PM
Latest Videos