ಹೇಮಾವತಿ ಕೆನಾಲ್ ವಿವಾದ: ಡಿಸಿಎಂ ಪರಮೇಶ್ವರ್​​ ಕಾರಿಗೆ ಅಡ್ಡ ಮಲಗಿ ರೈತರ ಪ್ರತಿಭಟನೆ

Edited By:

Updated on: Aug 12, 2026 | 10:47 AM

Hemavathi Linking Canal Row: ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಮಣ್ಣನಪಾಳ್ಯದಲ್ಲಿ ಹೇಮಾವತಿ ಲಿಂಕಿಂಗ್ ಕೆನಾಲ್ ಕಾಮಗಾರಿ ವಿವಾದ ತಾರಕಕ್ಕೇರಿದೆ. ಬರ ವೀಕ್ಷಣೆಗೆ ಬಂದ ಡಿಸಿಎಂ ಪರಮೇಶ್ವರ್ ಅವರ ಕಾರಿಗೆ ರೈತರು ಅಡ್ಡಲಾಗಿ ಬಿದ್ದು ಪ್ರತಿಭಟಿಸಿದ್ದಾರೆ. ನಮಗೆ ನ್ಯಾಯ ಬೇಕು, ಯೋಜನೆ ಆರಂಭಿಸಬೇಕು ಎಂದು ರೈತರು ಒತ್ತಾಯಿಸಿರುವ ಪ್ರಸಂಗ ನಡೆದಿದೆ.

ತುಮಕೂರು, ಆಗಸ್ಟ್​​ 12: ತುಮಕೂರಿನಲ್ಲಿ ಹೇಮಾವತಿ ಲಿಂಕಿಂಗ್ ಕೆನಾಲ್ ಕಾಮಗಾರಿ ವಿವಾದ ತಾರಕಕ್ಕೇರಿದ್ದು,
ಕಾಮಗಾರಿ ಸಂಬಂಧ ಪರ-ವಿರೋಧ ಹೋರಾಟಗಳು ತೀವ್ರಗೊಂಡಿವೆ. ಕಾಮಗಾರಿ ಆರಂಭಿಸುವಂತೆ ಆಗ್ರಹಿಸಿ ಕುಣಿಗಲ್ ರೈತರು, ಬರ ವೀಕ್ಷಣೆಗಾಗಿ ತೆರಳುತ್ತಿದ್ದ ಡಿಸಿಎಂ ಡಾ.ಜಿ.ಪರಮೇಶ್ವರ್​​ ಕಾರಿಗೆ ಅಡ್ಡ ಮಲಗಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಶೀಘ್ರದಲ್ಲೇ ಕಾಮಗಾರಿ ಆರಂಭ ಮಾಡೊದಾಗಿ ಭರವಸೆ ನೀಡುವ ಮೂಲಕ ಡಿಸಿಎಂ ರೈತರ ಮನವೊಲಿಸಿದ್ದು, ಹೇಮಾವತಿ ಲಿಂಕಿಂಗ್ ಕೆನಾಲ್ ಯೋಜನೆ ಗೊಂದಲದ ಗೂಡಾಗಿ ಮಾರ್ಪಟ್ಟಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಜಗದೀಶ ಬಿ.

ಜಗದೀಶ್​ ಬಸವರಾಜು ಟಿವಿ9 ಕನ್ನಡದ ಜಿಲ್ಲಾ ವರದಿಗಾರರಾಗಿದ್ದಾರೆ. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರಿನಲ್ಲಿ. ಪತ್ರಿಕೋದ್ಯಮ ಓದಿದ್ದು, ವೃತ್ತಿ ಬದುಕು ಆರಂಭಿಸಿದ್ದು ಕೂಡಾ ಬೆಂಗಳೂರಿನಲ್ಲಿ. ಟಿವಿ9ನಲ್ಲಿ ಎಂಟು ವರ್ಷ ಸಹಿತ ಹತ್ತು ವರ್ಷದ ಕ್ರೈಂ ವರದಿಗಾರಿಕೆಯ ಅನುಭವದ ಜೊತೆ ಸದ್ಯ ೨೦೨೫ರಿಂದ ತುಮಕೂರು ಜಿಲ್ಲಾವರದಿಗಾರನಾಗಿ ಮಾದ್ಯಮದ ವೃತ್ತಿ ಬದುಕು ಮುಂದುವರೆದಿದೆ.

Read More