ಹೇಮಾವತಿ ಲಿಂಕ್ ಕೆನಾಲ್ ಯೋಜನೆ ಅವೈಜ್ಞಾನಿಕವಾಗಿದೆ, ನಿಲ್ಲಿಸುವಂತೆ ಸಿಎಂ, ಡಿಸಿಎಂಗೆ ಹೇಳುತ್ತೇನೆ: ಸೋಮಣ್ಣ
ಯೋಜನೆಯಲ್ಲಿ ಹಲವು ತಾಂತ್ರಿಕ ದೋಷಗಳಿವೆ ಮತ್ತು ಸರ್ಕಾರದ ಪ್ರತಿನಿಧಿಗಳು ಜನರಿಗೆ ಮನವರಿಕೆ ಮಾಡಿಸಬೇಕಿತ್ತು, ಆದರೆ ಆ ಕೆಲಸವನ್ನು ಸಂಬಂಧಪಟ್ಟವರು ಮಾಡದ ಕಾರಣ ವಿರೋಧಗಳು ವ್ಯಕ್ತವಾಗುತ್ತಿವೆ, ಹಾಗಾಗೇ ಹೇಮಾವತಿ ಲಿಂಕ್ ಕೆನಾಲ್ ಯೋಜನೆ ಕಾಮಗಾರಿಯನ್ನು ನಿಲ್ಲಿಸಬೇಕೆಂದು ಹೇಳಿದ್ದೇನೆ ಎಂದು ಸೋಮಣ್ಣ ಹೇಳಿದರು. ಮಾಧ್ಯಮಗಳು ಇನ್ನೂ ಪ್ರಶ್ನೆ ಕೇಳುತ್ತಿದ್ದರೂ ಸೋಮಣ್ಣ ಅಲ್ಲಿಂದ ಹೊರಟರು.
ತುಮಕೂರು, ಜೂನ್ 11: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಕೇಂದ್ರ ಸಚಿವ ವಿ ಸೋಮಣ್ಣ
ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ಯೋಜನೆಗೆ ಸ್ಥಳೀಯರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ, ಇದೊಂದು ಅವೈಜ್ಞಾನಿಕ ಯೋಜನೆಯಾಗಿರುವುದರಿಂದ ಕೂಡಲೇ ಸ್ಥಗಿತಗೊಳಿಸಬೇಕೆಂದು ಹೇಳಿದರು. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಸ್ಥಳಕ್ಕೆ ಭೇಟಿ ನೀಡಿದ್ದರೆ ಅವರಿಗೆ ಯೋಜನೆ ಅವೈಜ್ಞಾನಿಕ ಎಂದು ಗೊತ್ತಾಗುತಿತ್ತು, ತಾನು ಮೂವರಿಗೂ ಪೋನ್ ಮಾಡುತ್ತೇನೆ, ಖುದ್ದಾಗಿಯೂ ಅವರನ್ನು ಭೇಟಿಯಾಗಿ ವಿಷಯವನ್ನು ತಿಳಿಸುತ್ತೇನೆ, ಏತನ್ಮಧ್ಯೆ ಕೆಲಸ ನಿಲ್ಲಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಸೋಮಣ್ಣ ಹೇಳಿದರು.
ಇದನ್ನೂ ಓದಿ: ಕುಟುಂಬದಲ್ಲಿ ನಡೆದ ಕಹಿಘಟನೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹತಾಷೆಗೆ ದೂಡಿರಬಹುದು: ವಿ ಸೋಮಣ್ಣ
ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ

ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್

ಪ್ರಿಯಾಂಕ್ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ

‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
