ಹಾಸನದಲ್ಲಿ 32 ಕಾಡಾನೆಗಳ ಹಿಂಡು ಪತ್ತೆ: ಡ್ರೋನ್​​ ಕ್ಯಾಮರಾದಲ್ಲಿ ಗಜಪಡೆಯ ದೃಶ್ಯ ಸೆರೆ

Edited By:

Updated on: Nov 20, 2026 | 7:23 PM

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಶೆಟ್ಟಿಹಳ್ಳಿ ಕಾಫಿ ತೋಟದಲ್ಲಿ ಡ್ರೋನ್ ಮೂಲಕ ಪರಿಶೀಲನೆ ವೇಳೆ 32 ಕಾಡಾನೆಗಳ ಬೃಹತ್ ಹಿಂಡು ಪತ್ತೆಯಾಗಿದ್ದು, ಅವುಗಳನ್ನು ಸುರಕ್ಷಿತವಾಗಿ ಅರಣ್ಯಕ್ಕೆ ಓಡಿಸಲು ಅರಣ್ಯ ಇಲಾಖೆ ಕಾರ್ಯಾಚರಣೆ ಕೈಗೊಂಡಿದೆ. ಯಾರಿಗೂ ಯಾವುದೇ ಸಮಸ್ಯೆ ಆಗದಂತೆ ಕಾಡಾನೆ ಓಡಿಸಲು ಎಪಿಸಿಸಿಎಫ್ ಸೂಚಿಸಿದ್ದಾರೆ.

ಹಾಸನ, ನವೆಂಬರ್​​ 20: ಬೇಲೂರು ತಾಲೂಕಿನಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಶೆಟ್ಟಿಹಳ್ಳಿಯ ಕಾಫಿ ತೋಟದಲ್ಲಿ ನಿಂತಿರುವ ಗಜಪಡೆಗಳ ಹಿಂಡು ಕಂಡುಬಂದಿದೆ. ಡ್ರೋನ್‌ ಮೂಲಕ ಪರಿಶೀಲನೆ ವೇಳೆ 32 ಕಾಡಾನೆಗಳ ಹಿಂಡು ಕಂಡುಬಂದಿದ್ದು, ಅವನ್ನು ಮತ್ತೆ ಅರಣ್ಯಕ್ಕೆ ಓಡಿಸಲು ಕ್ರಮ ಕೈಗೊಳ್ಳಲಾಗಿದೆ. ಈ ಬಗ್ಗೆ ಸಿಬ್ಬಂದಿ ಜೊತೆ ಎಪಿಸಿಸಿಎಫ್ ಮನೋಜ್ ರಾಜನ್ ಚರ್ಚೆ ನಡೆಸಿದ್ದು, ಯಾರಿಗೂ ಯಾವುದೇ ಸಮಸ್ಯೆ ಆಗದಂತೆ ಕಾಡಾನೆ ಓಡಿಸಲು ಸೂಚಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More