ಥಿಯೇಟರ್ ಹೌಸ್ಫುಲ್ಗೆ ಅವಕಾಶ; ಷರತ್ತುಗಳೇನು?
ಕೊರೊನಾ ಪ್ರಕರಣಗಳು ಇಳಿಮುಖ ಆದ ಬಳಿಕ ಎಲ್ಲ ಉದ್ಯಮಗಳು ಸಹಜಸ್ಥಿತಿಗೆ ಮರಳುತ್ತಿವೆ. ಆದರೆ ಚಿತ್ರೋದ್ಯಮ ಮಾತ್ರ ಸಂಕಷ್ಟದಲ್ಲೇ ಇದೆ. ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಆಸನ ಭರ್ತಿಗೆ ಮಾತ್ರ ಅವಕಾಶ ನೀಡಲಾಗಿದೆ.
ಕೊವಿಡ್ ಎರಡನೇ ಅಲೆ ಬಹುತೇಕ ಕಡಿಮೆ ಆಗಿದೆ. ಈ ಸಂದರ್ಭದಲ್ಲಿ ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಆಸನ ಭರ್ತಿಗೆ ಅವಕಾಶ ನೀಡಲಾಗಿದೆ. ಚಿತ್ರಮಂದಿರಕ್ಕೆ ಬರುವವರು ಕೊವಿಡ್ ಒಂದು ಡೋಸ್ಪಡೆದಿರುವುದು ಕಡ್ಡಾಯವಾಗಿದೆ. ಈ ಬೆಳವಣಿಗೆಯಿಂದ ಸ್ಟಾರ್ ಸಿನಿಮಾಗಳು ರಿಲೀಸ್ಗೆ ರೆಡಿ ಆಗುತ್ತಿವೆ.
ಕೊರೊನಾ ಪ್ರಕರಣಗಳು ಇಳಿಮುಖ ಆದ ಬಳಿಕ ಎಲ್ಲ ಉದ್ಯಮಗಳು ಸಹಜಸ್ಥಿತಿಗೆ ಮರಳುತ್ತಿವೆ. ಆದರೆ ಚಿತ್ರೋದ್ಯಮ ಮಾತ್ರ ಸಂಕಷ್ಟದಲ್ಲೇ ಇದೆ. ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಆಸನ ಭರ್ತಿಗೆ ಮಾತ್ರ ಅವಕಾಶ ನೀಡಲಾಗಿದೆ. ಈ ಪ್ರಮಾಣವನ್ನು ಶೇ.100ಕ್ಕೆ ಹೆಚ್ಚಿಸುವಂತೆ ಕನ್ನಡ ಚಿತ್ರರಂಗದ ನಿರ್ಮಾಪಕರು ಮನವಿ ಮಾಡಿಕೊಂಡಿದ್ದರು. ಈ ಸಂಬಂಧ ‘ಭಜರಂಗಿ 2’ ಚಿತ್ರದ ನಿರ್ಮಾಪಕ ಜಯಣ್ಣ, ಸಲಗ ಸಿನಿಮಾ ನಿರ್ಮಾಪಕ ಕೆ.ಪಿ. ಶ್ರೀಕಾಂತ್, ಕೋಟಿಗೊಬ್ಬ 3 ಚಿತ್ರಕ್ಕೆ ಬಂಡವಾಳ ಹೂಡಿರುವ ಸೂರಪ್ಪ ಬಾಬು ಸೇರಿದಂತೆ ಹಲವರ ಜೊತೆ ಸಚಿವ ಸುಧಾಕರ್ ಸಭೆ ನಡೆಸಿದ್ದರು. ಇದಾದ ಬೆನ್ನಲ್ಲೇ ಹೌಸ್ಫುಲ್ಗೆ ಅವಕಾಶ ಸಿಕ್ಕಿದೆ. ಇದಕ್ಕೆ ಹಲವು ಷರತ್ತುಗಳನ್ನು ವಿಧಿಸಲಾಗಿದೆ.
ಇದನ್ನೂ ಓದಿ: ಅಕ್ಟೋಬರ್ 1ರಿಂದ ಚಿತ್ರಮಂದಿರದಲ್ಲಿ ಶೇ.100ರಷ್ಟು ಆಸನ ಭರ್ತಿಗೆ ಅವಕಾಶ; ಷರತ್ತುಗಳು ಅನ್ವಯ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ

