ಸುಹಾಸ್ ಶೆಟ್ಟಿ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ ನೋಡಿ

Edited By:

Updated on: May 02, 2025 | 5:52 PM

ಮಂಗಳೂರು ಹೊರವಲಯದ ಕಿನ್ನಿಪದವು ಬಳಿ ನಿರ್ದಯವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. ನಿನ್ನೆ(ಮೇ 01) ರಾತ್ರಿ ಸ್ನೇಹಿತರ ಜೊತೆ ಇನ್ನೋವಾ ಕಾರಿನಲ್ಲಿ ಸುಹಾಸ್ ಶೆಟ್ಟಿ ಬರ್ತಿದ್ದ.. ಇದನ್ನ ಗಮನಿಸಿದ್ದ ಹಂತಕರು ಮೀನಿನ ಟೆಂಪೋ, ಸ್ವಿಫ್ಟ್ ಕಾರಲ್ಲಿ ಹಿಂಬಾಲಿಸಿಕೊಂಡು ಬಂದಿದ್ದರು. ಹಾಗೆ ಬಂದವರು ಸುಹಾಸ್ ಇದ್ದ ಇನ್ನೋವಾ ಕಾರಿಗೆ ಮೀನಿನ ಟೆಂಪೋದಿಂದ ಡಿಕ್ಕಿ ಹೊಡೆದಿದ್ದಾರೆ.

ಮಂಗಳೂರು, (ಮೇ 02): ಕರಾವಳಿಯಲ್ಲಿ ಮತ್ತೆ ರಕ್ತದೋಕುಳಿ ಹರಿದಿದೆ. 2 ವರ್ಷಗಳ ಹಿಂದೆ ಸುರತ್ಕಲ್​ನಲ್ಲಿ ನಡೆದಿದ್ದ ಫಾಜಿಲ್ ಎಂಬಾತನ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸುಹಾಸ್ ಶೆಟ್ಟಿಯನ್ನ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಮಂಗಳೂರು ಹೊರವಲಯದ ಕಿನ್ನಿಪದವು ಬಳಿ ನಿರ್ದಯವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. ನಿನ್ನೆ(ಮೇ 01) ರಾತ್ರಿ ಸ್ನೇಹಿತರ ಜೊತೆ ಇನ್ನೋವಾ ಕಾರಿನಲ್ಲಿ ಸುಹಾಸ್ ಶೆಟ್ಟಿ ಬರ್ತಿದ್ದ.. ಇದನ್ನ ಗಮನಿಸಿದ್ದ ಹಂತಕರು ಮೀನಿನ ಟೆಂಪೋ, ಸ್ವಿಫ್ಟ್ ಕಾರಲ್ಲಿ ಹಿಂಬಾಲಿಸಿಕೊಂಡು ಬಂದಿದ್ದರು. ಹಾಗೆ ಬಂದವರು ಸುಹಾಸ್ ಇದ್ದ ಇನ್ನೋವಾ ಕಾರಿಗೆ ಮೀನಿನ ಟೆಂಪೋದಿಂದ ಡಿಕ್ಕಿ ಹೊಡೆದಿದ್ದಾರೆ. ಬಳಿಕ ಸ್ವಿಫ್ಟ್ ಕಾರಿನಿಂದ ಇಳಿದ ದುಷ್ಕರ್ಮಿಗಳು ಸುಹಾಸ್ ಶೆಟ್ಟಿ ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಿ ಎಸ್ಕೇಪ್ ಆಗಿದ್ದಾರೆ.

Published on: May 02, 2025 05:48 PM
Follow Us
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More