ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ: ಕಾರ್ಯಕ್ರಮ ನೋಡಲು ಯಾರಿಗೆಲ್ಲ ಸಿಗಲಿದೆ ಅವಕಾಶ?
ಇಂದು ಸಂಜೆ ನಡೆಯುವ ಈ ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ಭಾಗಿ ಆಗಲಿದ್ದಾರೆ. ಯಾರಿಗೆಲ್ಲ ಅವಕಾಶ ಸಿಗಲಿದೆ ಎಂಬ ಬಗ್ಗೆ ಕನ್ನಡ, ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಮಂಜುಳಾ ಅವರು ಮಾಹಿತಿ ನೀಡಿದ್ದಾರೆ.
ಇಂದು (ನವೆಂಬರ್ 1) ಕನ್ನಡಿಗರ ಪಾಲಿಗೆ ವಿಶೇಷ ದಿನ. ಒಂದು ಕಡೆ ಕನ್ನಡ ರಾಜ್ಯೋತ್ಸವದ (Kannada Rajyotsava) ಆಚರಣೆ ನಡೆಯುತ್ತಿದ್ದರೆ ಮತ್ತೊಂದು ಕಡೆಯಲ್ಲಿ ಪುನೀತ್ ರಾಜ್ಕುಮಾರ್ (Puneeth Rajkumar) ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಇಂದು ಸಂಜೆ ನಡೆಯುವ ಈ ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ಭಾಗಿ ಆಗಲಿದ್ದಾರೆ. ಯಾರಿಗೆಲ್ಲ ಅವಕಾಶ ಸಿಗಲಿದೆ ಎಂಬ ಬಗ್ಗೆ ಕನ್ನಡ, ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಮಂಜುಳಾ ಅವರು ಮಾಹಿತಿ ನೀಡಿದ್ದಾರೆ. ವಿಧಾನಸೌಧ ಆವರಣದಲ್ಲಿ ಸುಮಾರು 5 ಸಾವಿರ ಜನರಿಗೆ ಅವಕಾಶ ಇದೆ. ಉಳಿದಂತೆ ವಿಧಾನಸೌಧ ರಸ್ತೆಯಲ್ಲಿ ಅಭಿಮಾನಿಗಳಿಗೆ ಕಾರ್ಯಕ್ರಮ ನೋಡುವ ಅವಕಾಶ ಸಿಗಲಿದೆ.