‘ಬಡವ ರಾಸ್ಕಲ್​’ ಸಿನಿಮಾ ಟ್ರೇಲರ್​ ರಿಲೀಸ್​ ಕಾರ್ಯಕ್ರಮ ಲೈವ್​ ವೀಕ್ಷಿಸಲು ಇಲ್ಲಿ ಕ್ಲಿಕ್​ ಮಾಡಿ

ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು ವಾಸುಕಿ ವೈಭವ್‌ ಸಂಗೀತ ಸಂಯೋಜನೆ ಮಾಡಿದ್ದಾರೆ. ಚಿತ್ರಕ್ಕೆ ಪ್ರೀತ ಜಯರಾಮನ್‌ ಛಾಯಾಗ್ರಹಣ, ನಿರಂಜನ್‌ ದೇವರಮನೆ ಸಂಕಲನ ಹಾಗೂ ವಿನೋದ್‌ ಸಾಹಸ ನಿರ್ದೇಶನವಿದೆ. ಈ ಚಿತ್ರವನ್ನು ಕೆಆರ್​ಜಿ ಸ್ಟೂಡಿಯೋಸ್ ಸಂಸ್ಥೆ ಬಿಡುಗಡೆ ಮಾಡುತ್ತಿದೆ.

‘ಬಡವ ರಾಸ್ಕಲ್​’ ಸಿನಿಮಾ ಟ್ರೇಲರ್​ ರಿಲೀಸ್​ ಕಾರ್ಯಕ್ರಮ ಲೈವ್​ ವೀಕ್ಷಿಸಲು ಇಲ್ಲಿ ಕ್ಲಿಕ್​ ಮಾಡಿ
| Updated By: ರಾಜೇಶ್ ದುಗ್ಗುಮನೆ

Updated on: Dec 13, 2021 | 5:27 PM

ನಟ ಧನಂಜಯ​ ಅವರು ನಟನೆ ಮೂಲಕ ಎಲ್ಲರ ಮೆಚ್ಚುಗೆ ಗಳಿಸಿದ್ದಾರೆ. ರಗಡ್​ ಪಾತ್ರವಾಗಲಿ, ಸಾಫ್ಟ್​ ಪಾತ್ರವಾಗಲಿ ಯಾವ ಕ್ಯಾರೆಕ್ಟರ್​ ಕೊಟ್ಟರೂ ಅದನ್ನು ಜೀವಿಸಿ ತೋರಿಸುತ್ತಾರೆ ಧನಂಜಯ. ಈಗ ಅವರು ನಿರ್ಮಾಣಕ್ಕೂ ಕೈ ಹಾಕಿದ್ದಾರೆ. ‘ಬಡವ ರಾಸ್ಕಲ್​’ ಸಿನಿಮಾ ನಿರ್ಮಾಣ ಮಾಡುವುದರ ಜತೆಗೆ, ನಟಿಸಿದ್ದಾರೆ. ಈ ಚಿತ್ರ ಕ್ರಿಸ್​ಮಸ್​ ಪ್ರಯುಕ್ತ ಡಿಸೆಂಬರ್​ 24ರಂದು ತೆರೆಗೆ ಬರುತ್ತಿದೆ. ಈ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ ನಡೆದಿದೆ. ‘ಡಾಲಿ ಪಿಕ್ಚರ್’ ಬ್ಯಾನರ್‌ನಲ್ಲಿ ಸಾವಿತ್ರಮ್ಮ ಅಡವಿ ಸ್ವಾಮಿ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಶಂಕರ್‌ ಗುರು ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಡಾಲಿ ಧನಂಜಯ ಅವರಿಗೆ ನಾಯಕಿಯಾಗಿ ಅಮೃತ ಅಯ್ಯಂಗಾರ್‌ ಕಾಣಿಸಿಕೊಂಡಿದ್ದಾರೆ. ಉಳಿದಂತೆ ರಂಗಾಯಣ ರಘು, ತಾರಾ, ಸ್ಪರ್ಶ ರೇಖಾ, ನಾಗಭೂಷಣ್‌, ಪೂರ್ಣಚಂದ್ರ ಮುಂತಾದವರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು ವಾಸುಕಿ ವೈಭವ್‌ ಸಂಗೀತ ಸಂಯೋಜನೆ ಮಾಡಿದ್ದಾರೆ. ಚಿತ್ರಕ್ಕೆ ಪ್ರೀತ ಜಯರಾಮನ್‌ ಛಾಯಾಗ್ರಹಣ, ನಿರಂಜನ್‌ ದೇವರಮನೆ ಸಂಕಲನ ಹಾಗೂ ವಿನೋದ್‌ ಸಾಹಸ ನಿರ್ದೇಶನವಿದೆ. ಈ ಚಿತ್ರವನ್ನು ಕೆಆರ್​ಜಿ ಸ್ಟೂಡಿಯೋಸ್ ಸಂಸ್ಥೆ ಬಿಡುಗಡೆ ಮಾಡುತ್ತಿದೆ.

ಇದನ್ನೂ ಓದಿ: ಬಿಸ್ಕತ್​ ಪ್ಯಾಕ್​ನಿಂದ ಹಿಡಿದು ದಿನಸಿ ಅಂಗಡಿವರೆಗೆ ಧನಂಜಯ್​ ನಟನೆಯ ‘ಬಡವ ರಾಸ್ಕಲ್​’ ಹವಾ

Follow us