ವಿಚಾರಣೆ ವೇಳೆ ಹಲವು ರೋಚಕ ವಿಚಾರ ಬಾಯ್ಬಿಟ್ಟ ಜಾಕ್ವೆಲಿನ್ ಫರ್ನಾಂಡಿಸ್
ಉದ್ಯಮಿಗಳಿಗೆ ಬಹುಕೋಟಿ ರೂಪಾಯಿ ವಂಚನೆ ಮಾಡಿದ ಆರೋಪ ಎದುರಿಸುತ್ತಿರುವ ಸುಕೇಶ್ ಚಂದ್ರಶೇಖರ್ ಜತೆಗೆ ಜಾಕ್ವೆಲಿನ್ ಫರ್ನಾಂಡಿಸ್ ಹೆಸರು ತಳುಕು ಹಾಕಿಕೊಂಡಿದೆ. ಅವರಿಬ್ಬರ ನಡುವೆ ಲವ್ವಿಡವ್ವಿ ನಡೆದಿತ್ತು ಎಂಬುದಕ್ಕೆ ಹಲವು ಫೋಟೋಗಳು ಸಾಕ್ಷಿ ಒದಗಿಸುತ್ತಿವೆ.
ಉದ್ಯಮಿಗಳಿಗೆ ಬಹುಕೋಟಿ ರೂಪಾಯಿ ವಂಚನೆ ಮಾಡಿದ ಆರೋಪ ಎದುರಿಸುತ್ತಿರುವ ಸುಕೇಶ್ ಚಂದ್ರಶೇಖರ್ ಜತೆಗೆ ಜಾಕ್ವೆಲಿನ್ ಫರ್ನಾಂಡಿಸ್ ಹೆಸರು ತಳುಕು ಹಾಕಿಕೊಂಡಿದೆ. ಅವರಿಬ್ಬರ ನಡುವೆ ಲವ್ವಿಡವ್ವಿ ನಡೆದಿತ್ತು ಎಂಬುದಕ್ಕೆ ಹಲವು ಫೋಟೋಗಳು ಸಾಕ್ಷಿ ಒದಗಿಸುತ್ತಿವೆ. ಅಚ್ಚರಿ ಎಂದರೆ ಜಾಕ್ವೆಲಿನ್ಗೆ ಪ್ರಕರಣದ ಕಿಂಗ್ಪಿನ್ ಸುಕೇಶ್ ಚಂದ್ರಶೇಖರ್ ವಂಚನೆ ಮಾಡಿದ್ದಾರಂತೆ! ಶ್ರೀಲಂಕಾ ಮೂಲದ ಈ ನಟಿಗೆ ಸುಕೇಶ್ ಅವರಿಂದ ಮೋಸ ಆಗಿದೆ. ಈ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ ಎನ್ನಲಾಗುತ್ತಿದೆ. ‘ನನಗೆ ಸುಕೇಶ್ ಯಾರು ಎಂಬುದು ಗೊತ್ತಿಲ್ಲ. ಏಕೆಂದರೆ ಈಗ ಬಂಧನಕ್ಕೆ ಒಳಗಾದ ವ್ಯಕ್ತಿ ನನ್ನ ಬಳಿ ಬಂದು ಶೇಖರ್ ರತ್ನ ವೇಲಾ ಎಂದು ಪರಿಚಯಿಸಿಕೊಂಡಿದ್ದ. ಸನ್ ಟಿವಿ ನೆಟ್ವರ್ಕ್ನ ಮಾಲೀಕ ನಾನು ಎಂದು ಆತ ಪರಿಚಯಿಸಿಕೊಂಡಿದ್ದ. ತಮಿಳುನಾಡಿನ ಮಾಜಿ ಸಿಎಂ ಜೆ. ಜಯಲಿತಾ ಅವರ ಸಂಬಂಧಿ ಎಂದೂ ಹೇಳಿದ್ದ. ಆತ ನನ್ನ ದೊಡ್ಡ ಫ್ಯಾನ್ ಎಂದು ಬಿಂಬಿಸಿಕೊಂಡಿದ್ದ. ಸನ್ ಟಿವಿ ದಕ್ಷಿಣದಲ್ಲಿ ಸಾಕಷ್ಟು ಸಿನಿಮಾಗಳನ್ನು ನಿರ್ಮಾಣ ಮಾಡುತ್ತಿದೆ. ಅದರಲ್ಲಿ ನೀವು ನಟಿಸಬೇಕು ಎಂದು ಆತ ಹೇಳಿಕೊಂಡಿದ್ದ’ ಎಂದಿದ್ದಾರೆ ಅವರು.
ಜಾಕ್ವೆಲಿನ್ ಫರ್ನಾಂಡಿಸ್ಗೂ ವಂಚನೆ? 36 ಲಕ್ಷ ರೂ ಬೆಕ್ಕು, 52 ಲಕ್ಷ ರೂ. ಬೆಲೆಯ ಕುದುರೆ ಬಗ್ಗೆ ಬಾಯ್ಬಿಟ್ಟ ನಟಿ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

