ನಟಿ ಸವಿ ಮಾದಪ್ಪ ಸಾವಿನ ಬಗ್ಗೆ ರಾಮನಗರ ಎಸ್ಪಿ ಹೇಳಿದ್ದಿಷ್ಟು
‘ಚೌಕಟ್ಟು’, ‘ಫನ್’ ಸಿನಿಮಾದಲ್ಲಿ ನಟಿಸಿದ್ದ ಸವಿ ಮಾದಪ್ಪ ಅವರು ದೊಡ್ಡಬೆಲೆ ಗ್ರಾಮದ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಿಗೆ ಕೇವಲ 25 ವರ್ಷ ವಯಸ್ಸಾಗಿತ್ತು.
‘ಚೌಕಟ್ಟು’, ‘ಫನ್’ ಸಿನಿಮಾದಲ್ಲಿ ನಟಿಸಿದ್ದ ಸವಿ ಮಾದಪ್ಪ ಅವರು ದೊಡ್ಡಬೆಲೆ ಗ್ರಾಮದ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಿಗೆ ಕೇವಲ 25 ವರ್ಷ ವಯಸ್ಸಾಗಿತ್ತು. ಸಾಯುವುದಕ್ಕೂ ಮೊದಲು ಸವಿ ಇನ್ಸ್ಟಾಗ್ರಾಮ್ನಲ್ಲಿ ಸಾಕಷ್ಟು ಪೋಸ್ಟ್ಗಳನ್ನು ಮಾಡಿದ್ದಾರೆ. ಜತೆಗೆ ಅವರು ಆಪ್ತರಿಗೆ ಧನ್ಯವಾದ ಅರ್ಪಿಸಿದ್ದಾರೆ.
ಸವಿ ಮಾದಪ್ಪ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಾಮನಗರ ಎಸ್ಪಿ ಎಸ್. ಗಿರೀಶ್ ಹೇಳಿಕೆ ನೀಡಿದ್ದಾರೆ. ‘ಬೆಳಗ್ಗೆ 9 – 11 ಗಂಟೆ ಸಮಯದಲ್ಲಿ ಸವಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೋಟ್ನಲ್ಲಿ ಬರೆದಿರುವುದು ತಿಳಿದುಬಂದಿದೆ. ಮುಂದೆ ತನಿಖೆಯ ನಂತರ ಮತ್ತಷ್ಟು ವಿಚಾರ ತಿಳಿಯಲಿದೆ’ ಎಂದಿದ್ದಾರೆ ಅವರು.
ಇದನ್ನೂ ಓದಿ: ಆತ್ಮಹತ್ಯೆ ಮಾಡಿಕೊಂಡ ನಟಿ ಸವಿ ಮಾದಪ್ಪ ಡೆತ್ ನೋಟ್ ಪತ್ತೆ; ಎಲ್ಲರಲ್ಲೂ ಕ್ಷಮೆ ಕೇಳಿದ್ದೇಕೆ?

