ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ವಿಚಾರಣೆ ಏಕೆ?

Updated on: Jun 20, 2024 | 8:54 AM

ರೇಣುಕಾ ಸ್ವಾಮಿ ಹತ್ಯೆ ಕೇಸ್​ನಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿ ಅನೇಕರನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ತಪ್ಪಿತಸ್ಥರು ಯಾರು ಎಂಬುದು ವಿಚಾರಣೆ ಬಳಿಕ ತಿಳಿದು ಬರಬೇಕಿದೆ. ಈ ಮಧ್ಯೆ ನಟ ಚಿಕ್ಕಣ್ಣ ಅವರನ್ನು ಕರೆಸಿ ಪೊಲೀಸರು ವಿಚಾರಣೆ ಮಾಡಿದ್ದರು. ವಿಜಯಲಕ್ಷ್ಮಿ ಕೂಡ ವಿಚಾರಣೆ ಎದುರಿಸಿದ್ದಾರೆ.

ಚಿತ್ರದುರ್ಗದ ರೇಣುಕಾ ಸ್ವಾಮಿ (Renuka Swamy) ಕೊಲೆ ಕೇಸ್​ನಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿ ಅನೇಕರನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ತಪ್ಪಿತಸ್ಥರು ಯಾರು ಎಂಬುದು ವಿಚಾರಣೆ ಬಳಿಕ ತಿಳಿದು ಬರಬೇಕಿದೆ. ಈ ಮಧ್ಯೆ ನಟ ಚಿಕ್ಕಣ್ಣ ಅವರನ್ನು ಕರೆಸಿ ಪೊಲೀಸರು ವಿಚಾರಣೆ ಮಾಡಿದ್ದರು. ಅವರು ದರ್ಶನ್ ಜೊತೆ ಪಾರ್ಟಿಯಲ್ಲಿ ಭಾಗಿಯಾದ ಕಾರಣ ಅವರನ್ನು ವಿಚಾರಣೆ ಮಾಡಲಾಗಿದೆ. ಇನ್ನು ದರ್ಶನ್ ಪತ್ನಿ ವಿಜಯಲಕ್ಷ್ಮಿ ಕೂಡ ವಿಚಾರಣೆ ಎದುರಿಸಿದ್ದಾರೆ. ಕೊಲೆ ನಡೆದ ಮರುದಿನ ದರ್ಶನ್ ಅವರು ಪತ್ನಿ ಜೊತೆ ಪೂಜೆಯಲ್ಲಿ ಭಾಗಿಯಾಗಿದ್ದರು. ಈ ಕಾರಣದಿಂದಲೇ ವಿಜಯಲಕ್ಷ್ಮಿ ಅವರನ್ನು ವಿಚಾರಣೆ ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.
ಇದನ್ನೂ ಓದಿ:

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More