ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಹಣವಿಲ್ಲದೇ ಬಡವಾಯ್ತೇ ಬಾಗಲಕೋಟೆ ಅಭಿವೃದ್ಧಿ ಪ್ರಾಧಿಕಾರ?

Edited By:

Updated on: Jun 20, 2025 | 8:43 PM

ಬಾಗಲಕೋಟೆಯ ನವನಗರದ ವಿದ್ಯುತ್ ಚಿತಾಗಾರದ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರಕ್ಕೆ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನೋಟಿಸ್ ನೀಡಿದೆ. ಬಿಲ್ ಪಾವತಿಸಲು ಜೂನ್ 15 ಕೊನೆಯ ದಿನಾಂಕವಾಗಿತ್ತು. ಈ ಬಾಕಿ ಮೊತ್ತವನ್ನು ಶೀಘ್ರದಲ್ಲಿ ಪಾವತಿಸುವುದಾಗಿ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ ತಿಳಿಸಿದೆ.

ಬಾಗಲಕೋಟೆ, ಜೂನ್​ 20: ಬಾಗಲಕೋಟೆಯ (Bagalkot) ‌ನವನಗರದಲ್ಲಿರುವ ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಪಾವತಿಸದ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರಕ್ಕೆ (BTDA) ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (HESCOM) ನೋಟಿಸ್ ನೀಡಿದೆ. ಬಿಟಿಡಿಎ1.97 ಲಕ್ಷ ರೂ. ಬಿಲ್​ ಬಾಕಿ ಉಳಿಸಿಕೊಂಡಿದೆ. ಬಿಲ್ ಪಾವತಿಗೆ ಜೂನ್​​ 15ರಂದು ಕೊನೇ ದಿನವಾಗಿತ್ತು. ಆದರೂ ಕೂಡ ಬಿಟಿಡಿಎ ಚಿತಾಗಾರದ ಬಿಲ್​ ಪಾವತಿಸಿಲ್ಲ. ಹೀಗಾಗಿ, ಹೆಸ್ಕಾಂ ಬಿಲ್​​ ಪಾವತಿಸುವಂತೆ ಬಿಟಿಡಿಎಗೆ ನೋಟಿಸ್​ ನೀಡಿದೆ.

ಈ ಸಂಬಂಧ ಬಿಟಿಡಿಎ, ಎಇಇ ಸೋಮಶೇಖರ್​ ನೋಟಗಾರ ಮಾತನಾಡಿ, ವಿದ್ಯುತ್ ಬಿಲ್ ಬಾಕಿ ಇದ್ದಿದ್ದು ನಿಜ. ಸದ್ಯ ಎಲ್ಲ ಕಟ್ಟಿದ್ದೇವೆ. ಎರಡು ತಿಂಗಳ ಬಿಲ್ ಬಾಕಿ ಇದೆ. ಶವ ದಹನಕ್ಕೆ ಯಾವುದೇ ತೊಂದರೆಯಿಲ್ಲ. ಬಾಕಿ ಇರುವ ವಿದ್ಯುತ್​ ಬಿಲ್ ಕೂಡ ಶೀಘ್ರದಲ್ಲಿ ಕಟ್ಟಲಾಗುತ್ತದೆ ಎಂದು ಹೇಳಿದರು.

ವಿದ್ಯುತ್ ಚಿತಾಗಾರವನ್ನು 4 ಕೋಟಿ ರೂ. ವೆಚ್ಚದಲ್ಲಿ 2021 ರಲ್ಲಿ ನಿರ್ಮಾಣ ಮಾಡಲಾಗಿದೆ. 2022ರ ಏಪ್ರಿಲ್ ನಿಂದ ಇದುವರೆಗೆ 11 ಶವಗಳನ್ನು ದಹನ ಮಾಡಲಾಗಿದೆ. ನಿರ್ಮಾಣವಾದಾಗಿನಿಂದ ಇದುವರೆಗೆ 35-40 ಶವಗಳನ್ನು ದಹನ ಮಾಡಲಾಗಿದೆ.

 

Published on: Jun 20, 2025 07:42 PM
Follow Us
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More