AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!

ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!

ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Jan 20, 2026 | 12:26 PM

Share

ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಮನೆಯೊಳಗೆ ಹುದುಗಿದ ಪುರಾತನ ದೇವಾಲಯಗಳು ಪತ್ತೆಯಾಗಿವೆ. ಇವು ಕಲ್ಯಾಣ ಚಾಲುಕ್ಯರ ಕಾಲಕ್ಕೆ ಸೇರಿದ ದೇಗುಲಗಳಾಗಿವೆ ಎಂದು ಇತಿಹಾಸ ತಜ್ಞರು ಹೇಳಿದ್ದಾರೆ. ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರವು ಈ ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಮುಂದಾಗಿದ್ದು, ಮನೆಯ ನಿವಾಸಿಗಳಿಗೆ ಸೂಕ್ತ ಪರಿಹಾರ ನೀಡಿ ಸಂರಕ್ಷಣಾ ಕಾರ್ಯ ಕೈಗೊಳ್ಳಲು ಸಿದ್ಧತೆ ನಡೆಸಿದೆ.

ಗದಗ, ಜನವರಿ 20: ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಉತ್ಖನನ ಕಾರ್ಯ ಐದನೇ ದಿನವೂ ಮುಂದುವರಿದೆ. ಈ ಮಧ್ಯೆ, ಉತ್ಖನನದ ವೇಳೆ ಮನೆಯೊಂದರ ಆವರಣದೊಳಗೆ ಪುರಾತನ ದೇವಾಲಯ ಪತ್ತೆಯಾಗಿದೆ. ಈ ದೇವಾಲಯ ಕಲ್ಯಾಣ ಚಾಲುಕ್ಯರು ಮತ್ತು ರಾಷ್ಟ್ರಕೂಟರ ಕಾಲಕ್ಕೆ ಸಂಬಂಧಿಸಿದ್ದು ಇರಬಹುದು ಎಂದು ಇತಿಹಾಸ ತಜ್ಞರು ಅಂದಾಜಿಸಿದ್ದಾರೆ. ಈ ದೇಗುಲ ಹೊರಗಿನಿಂದ ಸಾಮಾನ್ಯ ಮನೆಯಂತೆ ಕಂಡರೂ, ಒಳಗೆ ವಿಶಿಷ್ಟ ಶಿಲ್ಪಕಲೆಗಳನ್ನು ಒಳಗೊಂಡಿದೆ. ದೇಗುಲದಲ್ಲಿ ಈಶ್ವರ ಮತ್ತು ಅರ್ಧನಾರೀಶ್ವರ ವಿಗ್ರಹಗಳಿವೆ. ಸುಮಾರು ನಾಲ್ಕು ತಲೆಮಾರುಗಳಿಂದ ಈ ಮನೆಯಲ್ಲಿ ವಾಸಿಸುತ್ತಿರುವ ಕುಟುಂಬವು ಈ ದೇವಾಲಯಗಳನ್ನು ಪೂಜಿಸಿಕೊಂಡು ಬಂದಿದೆ. ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರ ಮತ್ತು ಜಿಲ್ಲಾಡಳಿತವು ಈ ಹುದುಗಿದ ದೇವಾಲಯಗಳ ಜೀರ್ಣೋದ್ಧಾರಕ್ಕೆ ಯೋಜನೆ ರೂಪಿಸಿವೆ. ಸೂಕ್ತ ಪರಿಹಾರ ನೀಡಿದ್ದಲ್ಲಿ ದೇವಾಲಯಗಳನ್ನು ಸರ್ಕಾರದ ವಶಕ್ಕೆ ನೀಡಲು ಸಿದ್ಧರಿರುವುದಾಗಿ ಕುಟುಂಬದವರು ತಿಳಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ