AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಮಡಿವಾಳ ಸಂಧ್ಯಾ ಥಿಯೇಟರ್ ಮಹಿಳಾ ಶೌಚಾಲಯದಲ್ಲಿ ಕ್ಯಾಮರಾ ಇಟ್ಟ ಯುವಕ, ಯುವತಿಯರು ಶಾಕ್

ಬೆಂಗಳೂರು: ಮಡಿವಾಳ ಸಂಧ್ಯಾ ಥಿಯೇಟರ್ ಮಹಿಳಾ ಶೌಚಾಲಯದಲ್ಲಿ ಕ್ಯಾಮರಾ ಇಟ್ಟ ಯುವಕ, ಯುವತಿಯರು ಶಾಕ್

ಗಣಪತಿ ಶರ್ಮಾ
|

Updated on: Jan 05, 2026 | 6:56 AM

Share

ಬೆಂಗಳೂರಿನ ಮಡಿವಾಳದ ಸಂಧ್ಯಾ ಥಿಯೇಟರ್‌ನ ಮಹಿಳಾ ಶೌಚಾಲಯದಲ್ಲಿ ಯುವಕನೊಬ್ಬ ರಹಸ್ಯ ಕ್ಯಾಮರಾ ಇಟ್ಟು ವಿಕೃತಿ ಮೆರೆದಿದ್ದಾನೆ. ಕ್ಯಾಮರಾ ಪತ್ತೆಯಾಗುತ್ತಿದ್ದಂತೆ ಸ್ಥಳೀಯರು ಆರೋಪಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ. ಪೊಲೀಸರು ಯುವಕನನ್ನು ವಶಕ್ಕೆ ಪಡೆದು, ಆತನ ಉದ್ದೇಶ ಹಾಗೂ ಹಿಂದಿನ ಕೃತ್ಯಗಳ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರು, ಜನವರಿ 5: ಬೆಂಗಳೂರಿನ ಮಡಿವಾಳದ ಸಂಧ್ಯಾ ಥಿಯೇಟರ್‌ನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಇಲ್ಲಿನ ಮಹಿಳಾ ಶೌಚಾಲಯದಲ್ಲಿ ಯುವಕನೊಬ್ಬ ರಹಸ್ಯ ಕ್ಯಾಮರಾ ಇಟ್ಟು ವಿಕೃತಿ ಮರೆದಿದ್ದಾನೆ. ಶೌಚಾಲಯಕ್ಕೆ ತೆರಳಿದ್ದ ಮಹಿಳೆಯರು ಮತ್ತು ಯುವತಿಯರು ಕ್ಯಾಮರಾ ಕಂಡು ಆಘಾತಕ್ಕೊಳಗಾಗಿದ್ದಾರೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳೀಯರು ಕೂಡಲೇ ಕಾರ್ಯಪ್ರವೃತ್ತರಾಗಿದ್ದಾರೆ. ಕ್ಯಾಮರಾ ಇಟ್ಟಿದ್ದ ಆರೋಪಿಯನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದು, ತನಿಖೆಯನ್ನು ಪ್ರಾರಂಭಿಸಿದ್ದಾರೆ. ಯುವಕ ಯಾರು, ಈ ಕೃತ್ಯದ ಹಿಂದಿನ ಉದ್ದೇಶವೇನು, ಈ ಹಿಂದೆ ಇಂತಹ ಕೃತ್ಯಗಳನ್ನು ನಡೆಸಿದ್ದಾನೆಯೇ ಅಥವಾ ಇದು ಮೊದಲ ಬಾರಿಯೇ ಎಂಬುದರ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More