ಹಾವೇರಿ ಕ್ಷೇತ್ರದ ಟಿಕೆಟ್ ಎಲ್ಲ ಸಮೀಕ್ಷೆಗಳನ್ನು ಗಮನಿಸಿದ ಬಳಿಕವೇ ವರಿಷ್ಠರು ನನಗೆ ನೀಡಿದ್ದಾರೆ: ಬಸವರಾಜ ಬೊಮ್ಮಾಯಿ
ಕ್ಷೇತ್ರಕ್ಕೆ ಸಂಬಂಧಿಸಿದ ಎಲ್ಲ ಅಂಶಗಳ ವಿವರ ಕೇಂದ್ರ ಸಂಸದೀಯ ಮಂಡಳಿ ಮತ್ತು ವರಿಷ್ಠರಾದ ಜೆಪಿ ನಡ್ಡಾ, ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಬಳಿಯಲ್ಲಿದ್ದು ಅವರು ಎಲ್ಲವನ್ನು ಗಮನದಲ್ಲಿಟ್ಟಿಕೊಂಡೇ ಅಭ್ಯರ್ಥಿಗಳ ಆಯ್ಕೆ ಮಾಡುತ್ತಿದ್ದಾರೆ, ಅವರ ತೀರ್ಮಾನಗಳನ್ನು ತಾವ್ಯಾರೂ ಪ್ರಶ್ನಿಸಲಾಗಲ್ಲ ಎಂದು ಬೊಮ್ಮಾಯಿ ಹೇಳಿದರು
ಕಲಬುರಗಿ: ನಗರದಲ್ಲಿಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ (PM Narendra Modi) ನೇತೃತ್ವದಲ್ಲಿ ನಡೆದ ಬಿಜೆಪಿ ಸಂಕಲ್ಪ ಸಮಾವೇಶದಲ್ಲಿ ಭಾಗಿಯಾಗಿದ್ದ ಮಾಜಿ ಮುಖ್ಯಮಂತ್ರಿ ಮತ್ತು ಹಾವೇರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಸವರಾಜ ಬೊಮ್ಮಾಯಿ (Basavaraj Bommai), ಬಿಜೆಪಿ ಹಿರಿಯ ನಾಯಕ ಕೆಎಸ್ ಈಶ್ವರಪ್ಪ (KS Eshwarappa) ಮಗ ಕಾಂತೇಶ್ ಗೆ ಹಾವೇರಿ ಟಿಕೆಟ್ ಸಿಗದಿರವುದಕ್ಕೆ ಪ್ರತಿಕ್ರಿಯೆ ನೀಡಿದರು. ಮಾಧ್ಯಮಗಳಿಗೆ ಎಲ್ಲಿಂದ ಮಾಹಿತಿ ಲಭ್ಯಾವಾಗುತ್ತದೆಯೋ ಗೊತ್ತಿಲ್ಲ, ಆದರೆ ಕ್ಷೇತ್ರಕ್ಕೆ ಸಂಬಂಧಿಸಿದ ಎಲ್ಲ ಅಂಶಗಳ ವಿವರ ಕೇಂದ್ರ ಸಂಸದೀಯ ಮಂಡಳಿ ಮತ್ತು ವರಿಷ್ಠರಾದ ಜೆಪಿ ನಡ್ಡಾ, ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಬಳಿಯಲ್ಲಿದ್ದು ಅವರು ಎಲ್ಲವನ್ನು ಗಮನದಲ್ಲಿಟ್ಟಿಕೊಂಡೇ ಅಭ್ಯರ್ಥಿಗಳ ಆಯ್ಕೆ ಮಾಡುತ್ತಿದ್ದಾರೆ, ಅವರ ತೀರ್ಮಾನಗಳನ್ನು ತಾವ್ಯಾರೂ ಪ್ರಶ್ನಿಸಲಾಗಲ್ಲ ಎಂದು ಬೊಮ್ಮಾಯಿ ಹೇಳಿದರು. ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಶೀಘ್ರದಲ್ಲಿ ಬಿಡುಗಡೆಯಾಗಲಿದೆ ಎಂದ ಅವರು 7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಸಿದ್ದರಾಮಯ್ಯ ಜಾರಿಗೊಳಿಸಲೇ ಬೇಕು ಎಂದರು.
ತಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ, ಆಯೋಗದ ಶಿಫಾರಸ್ಸಿನಂತೆ ಶೇಕಡ 17 ರಷ್ಟು ತಾತ್ಕಾಲಿಕ ಪರಿಹಾರವನ್ನು ಕೊಟ್ಟಾಗಿದೆ, ಅಂತಿಮ ಶಿಫಾರಸ್ಸನ್ನು ಈಡೇರಿಸುವ ಬಾಧ್ಯತೆ ಸರ್ಕಾರದ ಮೇಲಿದೆ, ಆದರೆ ಆಗ ದೊಡ್ಡ ದೊಡ್ಡ ಭಾಷಣ ಮಾಡುತ್ತಿದ್ದ ಸಿದ್ದರಾಮಯ್ಯ ಬಜೆಟ್ ನಲ್ಲಿ ಈ ಬಾಬತ್ತಿಗೆ ಹಣವನ್ನು ಮೀಸಲಿಟ್ಟಿಲ್ಲ ಎಂದು ಬೊಮ್ಮಾಯಿ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಪಕ್ಷಕ್ಕಾಗಿ ಬಹಳ ದುಡಿದಿರುವ ಈಶ್ವರಪ್ಪ ಮಗನಿಗಾಗಿ ಟಿಕೆಟ್ ಕೇಳಿದ್ದರಲ್ಲಿ ತಪ್ಪೇನೂ ಇಲ್ಲ: ಅರ್ ಅಶೋಕ, ಹಿರಿಯ ಬಿಜೆಪಿ ನಾಯಕ