AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಹೈಕಮಾಂಡ್​ಗೆ ಬ್ಲಾಕ್​ಮೇಲ್ ತಂತ್ರ ಗೊತ್ತಾಗಿದೆ: ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಯತ್ನಾಳ್ ಹೇಳಿದ್ದೇನು ನೋಡಿ

ಬಿಜೆಪಿ ಹೈಕಮಾಂಡ್​ಗೆ ಬ್ಲಾಕ್​ಮೇಲ್ ತಂತ್ರ ಗೊತ್ತಾಗಿದೆ: ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಯತ್ನಾಳ್ ಹೇಳಿದ್ದೇನು ನೋಡಿ

ಗಣಪತಿ ಶರ್ಮಾ
|

Updated on: May 26, 2026 | 2:10 PM

Share

ಬಿಜೆಪಿಯಲ್ಲಿ ಆಂತರಿಕ ಸಮಸ್ಯೆ, ವ್ಯಕ್ತಿ ಪೂಜೆ ಹಾಗೂ ಬ್ಲಾಕ್‌ಮೇಲ್ ತಂತ್ರಗಳು ಅತಿಯಾಗಿವೆ ಎಂದು ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಪಕ್ಷಕ್ಕಿಂತ ವ್ಯಕ್ತಿ ವೈಭವೀಕರಣ ಹೆಚ್ಚಾಗಿದೆ. ಕುಟುಂಬ ರಾಜಕಾರಣದಿಂದ ಬಿಜೆಪಿ ಮುಕ್ತವಾಗುತ್ತಿದೆ. ಹೈಕಮಾಂಡ್​​ಗೂ ಬ್ಲಾಕ್​ಮೇಲ್ ತಂತ್ರದ ಅರಿವಾಗಿದೆ ಎಂದು ಯತ್ನಾಳ್ ಹೇಳಿದ್ದಾರೆ.

ಬೆಂಗಳೂರು, ಮೇ 26: ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರವಾಗಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಕ್ ಯತ್ನಾಳ್ ಪ್ರತಿಕ್ರಿಯಿಸಿದ್ದು, ಪಕ್ಷದಲ್ಲಿ ಆಂತರಿಕ ಸಮಸ್ಯೆಗಳು ಹೆಚ್ಚಾಗಿವೆ ಎಂದಿದ್ದಾರೆ. ಪಕ್ಷದಲ್ಲಿ ವ್ಯವಸ್ಥಿತವಾಗಿ ಕೆಲಸ ನಡೆಯುತ್ತಿಲ್ಲ, ವ್ಯಕ್ತಿ ಪೂಜೆ ಅತಿಯಾಗಿದೆ ಹಾಗೂ ಪಕ್ಷಕ್ಕಿಂತ ವ್ಯಕ್ತಿ ವೈಭವೀಕರಣ ಹೆಚ್ಚಾಗಿದೆ ಎಂದು ಅವರು ಟೀಕಿಸಿದ್ದಾರೆ. ಬಿಜೆಪಿ ಹೈಕಮಾಂಡ್ ಅನ್ನು ಬ್ಲಾಕ್‌ಮೇಲ್ ಮಾಡುವಂತಹ ತಂತ್ರಗಳು ನಡೆಯುತ್ತಿವೆ. ಚಿತ್ರದುರ್ಗ ಮತ್ತು ಶಿವಮೊಗ್ಗದಲ್ಲಿ ನಡೆದ ಸ್ವಾಮೀಜಿಗಳ ಮೆರವಣಿಗೆ ಇಂತಹ ಕಾರ್ಯತಂತ್ರದ ಭಾಗವಾಗಿತ್ತು. ಹೈಕಮಾಂಡ್‌ಗೆ ಈ ಕುರಿತು ಮನವರಿಕೆಯಾಗಿದೆ ಎಂದು ಯತ್ನಾಳ್ ಹೇಳಿದರು.

ಒಂದು ಕುಟುಂಬವು ತಮ್ಮ ಶಕ್ತಿ ದೊಡ್ಡದಿದೆ ಎಂದು ಹೇಳಿ ಪಕ್ಷವನ್ನು ಒತ್ತಾಯಿಸುವ ಪ್ರಯತ್ನ ಮಾಡಿದೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಅಭಿಮಾನೋತ್ಸವದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪರೋಕ್ಷವಾಗಿ ಪಕ್ಷ ಒಂದು ಕುಟುಂಬದ ಹಿಡಿತದಿಂದ ಮುಕ್ತವಾಗುತ್ತಿದೆ ಎಂಬ ಸುಳಿವು ನೀಡಿದ್ದಾರೆ ಎಂದು ಯತ್ನಾಳ್ ಹೇಳಿದ್ದಾರೆ. ಅಲ್ಲದೆ, ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರೊಂದಿಗೆ ತೆಗೆದುಕೊಂಡ ಆ ಕುಟುಂಬದವರ (ಯಡಿಯೂರಪ್ಪರನ್ನು ಉದ್ದೇಶಿಸಿ) ಕೊನೆಯ ಫೋಟೋ ಇದನ್ನೇ ಸೂಚಿಸುತ್ತದೆ ಎಂದು ಯತ್ನಾಳ್ ವ್ಯಂಗ್ಯವಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More