ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ? ಆಂತರಿಕ ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು?

Edited By:

Updated on: May 22, 2026 | 2:35 PM

ಕರ್ನಾಟಕ ಬಿಜೆಪಿಯಲ್ಲಿನ (Karnataka BJP) ನಾಯಕತ್ವ ಗೊಂದಲ ನಿವಾರಿಸಲು ಹೈಕಮಾಂಡ್ ಮುಂದಾಗಿದೆ. ಇದಕ್ಕೆ ಪೂರಕವೆಂಬಂತೆ ಬಿಜೆಪಿ ರಾಷ್ಟ್ರೀಯ ನಾಯಕರಾದ ಶಿವಪ್ರಕಾಶ್ ಮತ್ತು ಬೈಜಯಂತ್ ಪಾಂಡಾ ಅವರು ಕೋರ್ ಸಮಿತಿ ಸದಸ್ಯರು, ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಸಂಸದರನ್ನು ಒಳಗೊಂಡ 31 ಆಯ್ದ ನಾಯಕರೊಂದಿಗೆ ರಹಸ್ಯ ಸಭೆ ನಡೆಸಿದ್ದಾರೆ. ಅಲ್ಲದೇ ನಾಯಕರ ಒನ್​ ಟು ಒನ್ ಅಭಿಪ್ರಾಯ ಸಂಗ್ರಹಿಸಿದ್ದಅರೆ. ರಾಜ್ಯ ನಾಯಕತ್ವದ ಕುರಿತು ಹಿರಿಯ ನಾಯಕರ ಅಭಿಪ್ರಾಯ ಸಂಗ್ರಹಿಸುವ ಈ ಪ್ರಕ್ರಿಯೆ, ರಾಜ್ಯಾಧ್ಯಕ್ಷರ ಆಯ್ಕೆಯಲ್ಲಿ ಅನುಸರಿಸುವ ಸಾಮಾನ್ಯ ಕ್ರಮ ಎಂದು ಹೇಳಲಾಗಿದೆ.

ಬೆಂಗಳೂರು, (ಮೇ 22): ಕರ್ನಾಟಕ ಬಿಜೆಪಿಯಲ್ಲಿನ (Karnataka BJP) ನಾಯಕತ್ವ ಗೊಂದಲ ನಿವಾರಿಸಲು ಹೈಕಮಾಂಡ್ ಮುಂದಾಗಿದೆ. ಇದಕ್ಕೆ ಪೂರಕವೆಂಬಂತೆ ಬಿಜೆಪಿ ರಾಷ್ಟ್ರೀಯ ನಾಯಕರಾದ ಶಿವಪ್ರಕಾಶ್ ಮತ್ತು ಬೈಜಯಂತ್ ಪಾಂಡಾ ಅವರು ಕೋರ್ ಸಮಿತಿ ಸದಸ್ಯರು, ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಸಂಸದರನ್ನು ಒಳಗೊಂಡ 31 ಆಯ್ದ ನಾಯಕರೊಂದಿಗೆ ರಹಸ್ಯ ಸಭೆ ನಡೆಸಿದ್ದಾರೆ. ಅಲ್ಲದೇ ನಾಯಕರ ಒನ್​ ಟು ಒನ್ ಅಭಿಪ್ರಾಯ ಸಂಗ್ರಹಿಸಿದ್ದಅರೆ. ರಾಜ್ಯ ನಾಯಕತ್ವದ ಕುರಿತು ಹಿರಿಯ ನಾಯಕರ ಅಭಿಪ್ರಾಯ ಸಂಗ್ರಹಿಸುವ ಈ ಪ್ರಕ್ರಿಯೆ, ರಾಜ್ಯಾಧ್ಯಕ್ಷರ ಆಯ್ಕೆಯಲ್ಲಿ ಅನುಸರಿಸುವ ಸಾಮಾನ್ಯ ಕ್ರಮ ಎಂದು ಹೇಳಲಾಗಿದೆ.

ವಿಜಯೇಂದ್ರ ಪರ ಮತ್ತು ವಿರುದ್ಧವಾಗಿದ್ದ ಮುಖಂಡರಿಂದಲೂ ಅಭಿಪ್ರಾಯ ಸಂಗ್ರಹಿಸಿದ್ದು, ಅಭಿಪ್ರಾಯ ಸಂಗ್ರಹ ವೇಳೆ ರಾಜ್ಯ ನಾಯಕರು ವಿವಿಧ ರೀತಿ ಸಲಹೆಗಳನ್ನ ನೀಡಿದ್ದಾರೆ. ಕೆಲವರಿಂದ ಬಿ.ವೈ.ವಿಜಯೇಂದ್ರ ಮುಂದುವರಿಕೆ ಬಗ್ಗೆ ಅಭಿಪ್ರಾಯ ತಿಳಿಸಿದ್ದಾರೆ, ಇನ್ನೂ ಕೆಲವರು ಪಕ್ಷದ ನಿರ್ಧಾರಕ್ಕೆ ಒಪ್ಪಿಕೊಳ್ಳುತ್ತೇವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕೆಲವರಿಂದ ರಾಜ್ಯಾಧ್ಯಕ್ಷರನ್ನು ಬದಲಿಸುವುದು ಸೂಕ್ತ ಎಂಬ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಬಿಜೆಪಿ ರಾಜ್ಯಾಧ್ಯಕ್ಷರ ಘೋಷಣೆ ಪ್ರಕ್ರಿಯೆ ಚುರುಕು, ಮಹತ್ವದ ಬದಲಾವಣೆಯ ಸುಳಿವು ಕೊಟ್ಟ ಉಸ್ತುವಾರಿ

Loading...
Unable to load recommendations.
Follow Us
ಕಿರಣ್​ ಹನಿಯಡ್ಕ

TV9 ಕನ್ನಡದಲ್ಲಿ ಹಿರಿಯ ರಾಜಕೀಯ ವರದಿಗಾರ. ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. 17 ವರ್ಷಗಳಿಂದ ಮಾಧ್ಯಮ ವೃತ್ತಿ. ಮುದ್ರಣ ಮಾಧ್ಯಮದಲ್ಲಿ ಸಬ್ ಎಡಿಟರ್, ವಿದ್ಯುನ್ಮಾನ ಮಾಧ್ಯಮದಲ್ಲಿ ನ್ಯೂಸ್ ಡೆಸ್ಕ್ ಮತ್ತು ರಾಜಕೀಯ ವರದಿಗಾರಿಕೆಯಲ್ಲಿ ಅನುಭವ.

Read More