AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುರ್ಚಿ ಕದನಕ್ಕೆ ತಾತ್ಕಾಲಿಕ ಬ್ರೇಕ್! ಜನವರಿ 9ರ ಬಳಿಕವೇ ಅಂತಿಮ ತೀರ್ಮಾನ?

ಕುರ್ಚಿ ಕದನಕ್ಕೆ ತಾತ್ಕಾಲಿಕ ಬ್ರೇಕ್! ಜನವರಿ 9ರ ಬಳಿಕವೇ ಅಂತಿಮ ತೀರ್ಮಾನ?

ಭಾವನಾ ಹೆಗಡೆ
|

Updated on: Dec 28, 2025 | 10:52 AM

Share

ಕರ್ನಾಟಕದಲ್ಲಿ ಕುರ್ಚಿ ಕದನ ಮುಂದುವರೆದಿದ್ದು, ಶಾಸಕರು ಮಂತ್ರಿ ಪಟ್ಟಕ್ಕೆ ನಾ ಮುಂದು ತಾ ಮುಂದು ಎಂದು ಮುಗಿಬೀಳುತ್ತಿದ್ದಾರೆ. ಆದರೆ ಸಂಪುಟ ಪುನಾರಚನೆ ವಿಚಾರಕ್ಕೆ ತಾತ್ಕಾಲಿಕ ಬ್ರೇಕ್ ಬಿದ್ದಿದ್ದು, ಜನವರಿ 9ರ ಬಳಿಕವಷ್ಟೇ ಅಧಿಕಾರ ಹಂಚಿಕೆ ಕುರಿತು ಚರ್ಚೆ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ದೆಹಲಿಗೆ ತೆರಳಿ CWC ಸಭೆಯಲ್ಲಿ ಭಾಗವಹಿಸಿದ್ದರು.ಈ ವೇಳೆ ರಾಜ್ಯದ ಅಧಿಕಾರ ಹಂಚಿಕೆ ಅಥವಾ ಸಚಿವ ಸಂಪುಟ ಪುನರ್ರಚನೆ ಕುರಿತು ಹೈಕಮಾಂಡ್ ನಾಯಕರೊಂದಿಗೆ ಚರ್ಚಿಸಲು ಅವರಿಗೆ ಅವಕಾಶ ಸಿಕ್ಕಿಲ್ಲ.

ಬೆಂಗಳೂರು, ಡಿಸೆಂಬರ್ 28: ಕರ್ನಾಟಕದಲ್ಲಿ ಕುರ್ಚಿ ಕದನ ಮುಂದುವರೆದಿದ್ದು, ಮುಖ್ಯಮಂತ್ರಿ ಪಟ್ಟಕ್ಕಾಗಿ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ನಡುವೆ ಹಗ್ಗ ಜಗ್ಗಾಟ ನಡೆಯುತ್ತಲೇ ಇದೆ. ಈ ವಿಚಾರವಾಗಿ ಹೈಕಮಾಂಡ್​ ನಿರ್ಧಾರದ ನಿರೀಕ್ಷೆಯಿತ್ತು. ಆದರೆ ಮುಖ್ಯಮಂತ್ರಿ ಪಟ್ಟ ಗುದ್ದಾಟಕ್ಕೆ ತಾತ್ಕಾಲಿಕ ಬ್ರೇಕ್ ಬಿದ್ದಿದ್ದು,  ರಾಹುಲ್ ಗಾಂಧಿ ವಿದೇಶ ಪ್ರವಾಸದಲ್ಲಿರುವುದು ಇದಕ್ಕೆ ಕಾರಣವಾಗಿದೆ. ವಿಪಕ್ಷ ನಾಯಕ ಜನವರಿ 8ರಂದು ದೆಹಲಿಗೆ ಮರಳಲಿದ್ದು, ಅವರ ವಾಪಸಾತಿಯ ನಂತರವೇ ಹೈಕಮಾಂಡ್ ನಾಯಕರ ಜೊತೆಗೆ ಪ್ರತ್ಯೇಕ ಸಭೆ ನಡೆಯುವ ನಿರೀಕ್ಷೆಯಿದೆ ಎನ್ನಲಾಗುತ್ತಿದೆ.

ಇತ್ತ ಕೈ ಶಾಸಕರು ಮಂತ್ರಿ ಪಟ್ಟಕ್ಕೆ ನಾ ಮುಂದು ತಾ ಮುಂದು ಎಂದು ಮುಗಿಬೀಳುತ್ತಿದ್ದಾರೆ.  ಆದರೆ ಇದರ ನಿರ್ಧಾರವು ರಾಹುಲ ಗಾಂಧಿ ಬಂದ ಬಳಿಕವೇ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ದೆಹಲಿಗೆ ತೆರಳಿ CWC ಸಭೆಯಲ್ಲಿ ಭಾಗವಹಿಸಿದ್ದರು.ಈ ವೇಳೆ ರಾಜ್ಯದ ಅಧಿಕಾರ ಹಂಚಿಕೆ ಕುರಿತು ಹೈಕಮಾಂಡ್ ನಾಯಕರೊಂದಿಗೆ ಚರ್ಚಿಸಲು ಅವರಿಗೆ ಅವಕಾಶ ಸಿಕ್ಕಿರಲಿಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.