ಪಕ್ಷವಿರೋಧಿ ಚಟುವಟಿಕೆ ನಡೆಸುತ್ತಿರುವ ವಿಜಯೇಂದ್ರ ವಿರುದ್ಧವೂ ನೋಟೀಸ್ ಜಾರಿಯಾಗಬೇಕು: ರಮೇಶ್ ಜಾರಕಿಹೊಳಿ

ಪಕ್ಷವಿರೋಧಿ ಚಟುವಟಿಕೆ ನಡೆಸುತ್ತಿರುವ ವಿಜಯೇಂದ್ರ ವಿರುದ್ಧವೂ ನೋಟೀಸ್ ಜಾರಿಯಾಗಬೇಕು: ರಮೇಶ್ ಜಾರಕಿಹೊಳಿ

ಅರುಣ್​ ಕುಮಾರ್​ ಬೆಳ್ಳಿ
|

Updated on: Dec 03, 2024 | 2:32 PM

ವಿಜಯೇಂದ್ರ ಪಕ್ಷದ ರಾಜ್ಯಾಧ್ಯಕ್ಷನಾಗಿದ್ದರೂ ಅವರ ಸುತ್ತಮುತ್ತ ಕೇವಲ ಎಸ್ಸಿ ಮತ್ತು ಎಸ್ಟಿ ಸಮುದಾಯಗಳಿಗೆ ಸೇರಿದ ಶಾಸಕರಿರುತ್ತಾರೆ, ಅವರನ್ನ ಹೆದರಿಸಿ ಬೆದರಿಸಿ ಯತ್ನಾಳ್ ವಿರುದ್ಧ ಪ್ರತಿಭಟನೆ ಮಾಡುವಂತೆ ಬಿಜೆಪಿ ಜಿಲ್ಲಾಧ್ಯಕ್ಷರ ಒತ್ತಡ ಹೇರಿಸುತ್ತಿದ್ದಾರೆ, ಪಕ್ಷದ ಹೈಕಮಾಂಡ್ ವಿಜಯೇಂದ್ರ ವಿರುದ್ಧವೂ ನೋಟೀಸ್ ಜಾರಿ ಮಾಡಬೇಕು ಎಂದು ರಮೇಶ್ ಜಾರಕಿಹೊಳಿ ಹೇಳಿದರು.

ದೆಹಲಿ: ಪ್ರಸ್ತುತವಾಗಿ ನಾವು ವಕ್ಫ್ ವಿರುದ್ಧ ಮಾಡಿದ ಹೋರಾಟದ ವರದಿಯನ್ನು ಜೆಪಿಸಿಗೆ ನೀಡಲು ಬಂದಿದ್ದೇವೆ, ಮುಂದಿನ ಸಲ ಬಂದಾಗ ಬಿವೈ ವಿಜಯೇಂದ್ರ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿರುವರೆಂದು ವರಿಷ್ಠರಿಗೆ ದೂರು ನೀಡಲಿದ್ದೇವೆ ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಹೇಳಿದರು. ವಕ್ಫ್ ವಿರುದ್ಧ ಹೋರಾಡುತ್ತಿರುವ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪರಿಶಿಷ್ಟ ಜಾತಿ ಮತ್ತು ವರ್ಗದ ಶಾಸಕರನ್ನು ಎತ್ತಿಕಟ್ಟುವುದಕ್ಕೋಸ್ಕರ ಅವರನ್ನು ಮೀಟಿಂಗ್​ಗೆ ಕರೆದು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಜಾರಕಿಹೊಳಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿವಿಜಯೇಂದ್ರ ಭ್ರಷ್ಟ, ಆತನ ನಾಯಕತ್ವಕ್ಕೆ ನನ್ನ ವಿರೋಧ; ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧವೇ ರಮೇಶ್ ಜಾರಕಿಹೊಳಿ ಕಿಡಿ