ಕೆಪಿಸಿಸಿ ಅಧ್ಯಕ್ಷನ ಬದಲಾವಣೆ ಕುರಿತು ನಡೆದಿರುವ ಚರ್ಚೆ ಸಿಎಂ ದೆಹಲಿಯಿಂದ ವಾಪಸ್ಸಾದ ಬಳಿಕ ಗೊತ್ತಾಗುತ್ತದೆ: ಜಾರಕಿಹೊಳಿ
ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗ ಬಯಸುವವರು ಸಿದ್ದರಾಮಯ್ಯ ಸಂಪುಟದಲ್ಲಿ ಮಿನಿಸ್ಟ್ರಾಗಿದ್ದರೆ ಹುದ್ದೆಯನ್ನು ತ್ಯಜಿಸಬೇಕಾಗುತ್ತದೆ ಎಂದು ಹೇಳುತ್ತಿರುವುದಕ್ಕೆ ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ, ಷರತ್ತುಗಳನ್ನು ಏನು ವಿಧಿಸುತ್ತಾರೋ ಅಂತ ಗೊತ್ತಿಲ್ಲ, ಅಧ್ಯಕ್ಷನ ಬದಲಾವಣೆ ನಿಶ್ಚಿತ ಅಂತ ಗೊತ್ತಾದ ಮೇಲೆ ಆಕಾಂಕ್ಷಿಗಳನ್ನು ಕರೆದು ಮಾತಾಡಿಸುತ್ತಾರೆ ಎಂದು ಹೇಳಿದರು.
ಬೆಂಗಳೂರು, ಏಪ್ರಿಲ್ 4: ತಮ್ಮ ಕಚೇರಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಸಚಿವ ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷನ (KPCC president) ಬದಲಾವಣೆ ಬಗ್ಗ ಹೈಕಮಾಂಡ್ ಮಟ್ಟದಲ್ಲಿ ನಡೆದಿರುವ ಚರ್ಚೆ ಏನು ಅನ್ನೋದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಪಸ್ಸು ಬಂದ ಬಂದ ನಂತರವೇ ಗೊತ್ತಾಗಬೇಕು ಎಂದು ಹೇಳಿದರು. ವಿಷಯವನ್ನು ಪಕ್ಷದ ವರಿಷ್ಠರು ಎಷ್ಟು ಗಂಭೀರವಾಗಿ ಪರಿಣಿಸಿದ್ದಾರೆ ಅಂತ ಗೊತ್ತಿಲ್ಲ, ಅವರು ಬದಲಾವಣೆ ಅಗತ್ಯ ಎಂದು ಭಾವಿಸಿದ್ದರೆ ಅದಕ್ಕಾಗಿ ಪ್ರಕ್ರಿಯ ಶುರುವಾಗುತ್ತದೆ, ಎಂದು ಸತೀಶ್ ಜಾರಕಿಹೊಳಿ ಹೇಳಿದರು.
ಇದನ್ನೂ ಓದಿ: ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಹಿಂದೆ ಹೇಳಿದ್ದನ್ನೇ ಪುನರಾವರ್ತಿಸಿದರು!
ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ
Published on: Apr 04, 2025 01:44 PM
Latest Videos

Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ

Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ

ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು

ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
