AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ಸಿಎಂ ಆಯ್ಕೆ ಬಗ್ಗೆ ಹೈಕಮಾಂಡ್ ನಿರ್ಧಾರವೇ ಅಂತಿಮ: ಸಿದ್ದರಾಮಯ್ಯ ಸ್ಪಷ್ಟನೆ

ಮುಂದಿನ ಸಿಎಂ ಆಯ್ಕೆ ಬಗ್ಗೆ ಹೈಕಮಾಂಡ್ ನಿರ್ಧಾರವೇ ಅಂತಿಮ: ಸಿದ್ದರಾಮಯ್ಯ ಸ್ಪಷ್ಟನೆ

ಪ್ರಸನ್ನ ಹೆಗಡೆ
|

Updated on: May 28, 2026 | 5:13 PM

Share

ಸಿದ್ದರಾಮಯ್ಯ ಅವರು ಹೈಕಮಾಂಡ್​​ ಆಫರ್​​ ಮಾಡಿದ್ದ ರಾಜ್ಯಸಭಾ ಸ್ಥಾನವನ್ನು ವಿನಮ್ರವಾಗಿ ನಿರಾಕರಿಸಿ, ರಾಜ್ಯ ರಾಜಕಾರಣದಲ್ಲೇ ತಾವು ಮುಂದುವರಿಯುವ ಇಂಗಿತ ವ್ಯಕ್ತಪಡಿಸಿದ್ದಾರೆ. ಹೈಕಮಾಂಡ್ ಸೂಚನೆಯಂತೆ ಯಾವುದೇ ಒತ್ತಡವಿಲ್ಲದೆ ತಕ್ಷಣವೇ ರಾಜೀನಾಮೆ ನೀಡಿದ್ದು, ಮುಂದಿನ ಮುಖ್ಯಮಂತ್ರಿಯ ಆಯ್ಕೆಯನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು, ಮೇ 28: ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಆಯ್ಕೆ ಮತ್ತು ಸಿದ್ದರಾಮಯ್ಯ ಅವರ ರಾಜೀನಾಮೆ ಕುರಿತಂತೆ ರಾಜ್ಯ ರಾಜಕಾರಣದಲ್ಲಿ ಬಿರುಸಿನ ಚರ್ಚೆ ನಡೆಯುತ್ತಿದೆ. ಡಿಕೆ ಶಿವಕುಮಾರ್ ಅವರೊಂದಿಗೆ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಸಿದ್ದರಾಮಯ್ಯ ಅವರು, ತಮಗೆ ಹೈಕಮಾಂಡ್‌ನಿಂದ ರಾಜ್ಯಸಭಾ ಸ್ಥಾನದ ಆಫರ್ ಬಂದಿದ್ದರೂ, ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲದ ಕಾರಣ ಅದನ್ನು ವಿನಮ್ರವಾಗಿ ನಿರಾಕರಿಸಿರೋದಾಗಿ ತಿಳಿಸಿದ್ದಾರೆ. ನಾನು ರಾಜ್ಯ ರಾಜಕಾರಣದಲ್ಲೇ ಇರುತ್ತೇನೆ. ಜನ ನನ್ನನ್ನು ಐದು ವರ್ಷಕ್ಕೆ ಆಯ್ಕೆ ಮಾಡಿದ್ದಾರೆ, ಇನ್ನೆರಡು ವರ್ಷಗಳು ಬಾಕಿ ಇವೆ. ಅಲ್ಲಿಯವರೆಗೂ ಕರ್ನಾಟಕದ ಜನತೆ ಮತ್ತು ನನ್ನ ಕ್ಷೇತ್ರದ ಜನರ ಪರವಾಗಿ ಕೆಲಸ ಮಾಡುತ್ತೇನೆ ಎಂದವರು ಹೇಳಿದ್ದಾರೆ.

ತಮ್ಮ ರಾಜೀನಾಮೆ ಕುರಿತು ಮಾತನಾಡಿದ ಅವರು, ಹೈಕಮಾಂಡ್ ಯಾವಾಗ ಹೇಳುತ್ತದೋ ಆಗ ರಾಜೀನಾಮೆ ನೀಡುತ್ತೇನೆ ಎಂದು ಮೊದಲಿನಿಂದಲೂ ಹೇಳುತ್ತಿದ್ದೆ. ಯಾವುದೇ ಒತ್ತಡವಿಲ್ಲದೆ, ಹೈಕಮಾಂಡ್ ಸೂಚನೆ ನೀಡಿದ ತಕ್ಷಣ ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡಿದ್ದೇನೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಮುಂದಿನ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆಗೆ ಉತ್ತರಿಸಿದ ಸಿದ್ರಾಮಯ್ಯ, ಆ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ. ಶಾಸಕಾಂಗ ಪಕ್ಷದ ನಿರ್ಧಾರ ಮತ್ತು ಹೈಕಮಾಂಡ್ ನಿರ್ಧಾರದಂತೆ ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರು ಎಂಬುದು ಅಂತಿಮವಾಗಲಿದೆ ಎಂದವರು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
Prasanna Hegde
Prasanna Hegde

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More