Loading video

Karnataka Assembly Polls; ಮುಖ್ಯಮಂತ್ರಿಯನ್ನು ಹೈಕಮಾಂಡ್ ಆಯ್ಕೆ ಮಾಡುತ್ತದೆ: ಜಿ ಪರಮೇಶ್ವರ್, ಕಾಂಗ್ರೆಸ್ ನಾಯಕ

Updated on: May 12, 2023 | 12:09 PM

ಕಾಂಗ್ರೆಸ್ ಸ್ವಂತ ಬಲದ ಮೇಲೆ ಸರ್ಕಾರ ರಚಿಸುವಷ್ಟು ಸ್ಥಾನಗಳನ್ನು ಗೆದ್ದೇ ಗೆಲ್ಲುತ್ತದೆ ಎಂದು ಪರಮೇಶ್ವರ್ ಹೇಳಿದರು.

ಬೆಂಗಳೂರು: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆದು ಅಧಿಕಾರಕ್ಕೆ ಬಂದರೆ, ಮುಖ್ಯಮಂತ್ರಿ ರೇಸ್ ನಲ್ಲಿರುವವರ ಪೈಕಿ ಒಬ್ಬರಾಗಿರುವ ಡಾ ಜಿ ಪರಮೇಶ್ವರ್ (Dr G Parameshwar) ಇಂದು ಬೆಳಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆರನ್ನು (Mallikarjun Kharge) ಅವರ ಸದಾಶಿವನಗರ ನಿವಾಸದಲ್ಲಿ ಭೇಟಿಯಾದರು. ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ಯಾರು ಮುಖ್ಯಮಂತ್ರಿ ಆಗುತ್ತಾರೆ ಅಂತ ಹೇಳಿಕೆಗಳನ್ನು ನೀಡುತ್ತಾ ಹೋದರೆ ಸುಖಾಸುಮ್ಮನೆ ಗೊಂದಲ ಸೃಷ್ಟಿಯಾಗುತ್ತದೆ, ಆ ವಿಚಾರ ಹೈಕಮಾಂಡ್ (high command) ಸುಪರ್ದಿಗೆ ಬಿಟ್ಟಿದ್ದು ಎಂದು ಹೇಳಿದರು. ಕಾಂಗ್ರೆಸ್ ಸ್ವಂತ ಬಲದ ಮೇಲೆ ಸರ್ಕಾರ ರಚಿಸುವಷ್ಟು ಸ್ಥಾನಗಳನ್ನು ಗೆದ್ದೇ ಗೆಲ್ಲುತ್ತದೆ ಎಂದು ಪರಮೇಶ್ವರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ