ಯಶವಂತಪುರ ಎಪಿಎಂಸಿಗೆ ದಿಢೀರ್​​​ ಭೇಟಿ, ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ

Edited By:

Updated on: Sep 09, 2026 | 7:00 PM

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ದಿಢೀರ್​ ಭೇಟಿಯನ್ನು ಕರ್ನಾಟಕ ಹೈಕೋರ್ಟ್ ಪ್ರಶಂಸಿಸಿದೆ. ಕಾರ್ಮಿಕ ಪ್ರಕರಣವೊಂದರ ವಿಚಾರಣೆ ವೇಳೆ ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರು ಶಿವಕುಮಾರ್‌ರವರ ನಡೆ ಶ್ರೇಷ್ಠ ಕಾರ್ಯ ಎಂದು ಬಣ್ಣಿಸಿದ್ದಾರೆ. ಈರುಳ್ಳಿ, ಬೆಳ್ಳುಳ್ಳಿ ದರ ಪರಿಶೀಲನೆ ಹಾಗೂ ಕಾರ್ಮಿಕರೊಂದಿಗೆ ಸಂವಾದ ನಡೆಸಿದ್ದಕ್ಕೆ ಈ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು, ಸೆಪ್ಟೆಂಬರ್​​ 09: ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ಸಿಎಂ ಡಿಕೆ ಶಿವಕುಮಾರ್​​ ಭೇಟಿಗೆ ಹೈಕೋರ್ಟ್​​ನ ನ್ಯಾಯಮೂರ್ತಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಸಿಎಂ ಭೇಟಿಯನ್ನು ಯಾರಾದರೂ ಗಿಮಿಕ್ ಎನ್ನಬಹುದು, ಆದರೆ ಅದು ಗ್ರೇಟ್ ಜಾಬ್ ಎಂದು ಕಾರ್ಮಿಕ ಪ್ರಕರಣವೊಂದರ ವಿಚಾರಣೆ ವೇಳೆ ನ್ಯಾ.ವಿ.ಶ್ರೀಶಾನಂದ ಅಭಿಪ್ರಾಯಪಟ್ಟಿದ್ದಾರೆ. ಭೇಟಿ ವೇಳೆ ಸಿಎಂ ಈರುಳ್ಳಿ, ಬೆಳ್ಳುಳ್ಳಿ, ಶುಂಠಿ ದರ ಪರಿಶೀಲಿಸಿದ್ದಾರೆ. ಕಾರ್ಮಿಕ ಹೆಣ್ಣುಮಕ್ಕಳ ಜೊತೆ ಮಾತನಾಡಿದ್ದಾರೆ ಎಂಬುದನ್ನು ನ್ಯಾಯಮೂರ್ತಿಗಳು ಪ್ರಸ್ತಾಪಿಸಿಸಿದ್ದಾರೆ. ಎಪಿಎಂಸಿ ಮಳಿಗೆಗಳು ಯಾರದ್ದೋ ಹೆಸರಿನಲ್ಲಿರುತ್ತವೆ. ಮತ್ಯಾರೋ ಬಾಡಿಗೆದಾರರು ಅಲ್ಲಿರುತ್ತಾರೆಂದು ಅವರು ಈ ವೇಳೆ ಅಭಿಪ್ರಾಯಪಟ್ಟಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ರಮೇಶ್​ ಎಮ್​.

ರಮೇಶ್​ ಎಂ ವಿಶೇಷ ವರದಿಗಾರರಾಗಿದ್ದಾರೆ, ಮೂಲತಃ ಕಾನೂನು ಪದವೀಧರನಾಗಿದ್ದು ಕಳೆದ 18 ವರ್ಷಗಳಿಂದ ಟಿವಿ9 ಸುದ್ದಿ ವಾಹಿನಿಯಲ್ಲಿ ಕಾನೂನು ಸಂಬಂಧಿತ ವರದಿ ನೀಡುತ್ತಿದ್ದಾರೆ. ಹೈಕೋರ್ಟ್, ಸುಪ್ರೀಂ ಕೋರ್ಟ್ ಹಾಗೂ ವಿಚಾರಣಾ ನ್ಯಾಯಾಲಯಗಳ ಪ್ರಮುಖ ಪ್ರಕರಣಗಳ ವರದಿಗಾರಿಕೆ ಮಾಡುತ್ತಿದ್ದು, ಬೆಂಗಳೂರಿನ ನಿವಾಸಿಯಾಗಿದ್ದಾರೆ.

Read More