AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಪ್ಪನ ಅಗ್ರಹಾರದಲ್ಲಿ ಹೈಡ್ರಾಮಾ: ಜೈಲಧಿಕಾರಿಗಳ ಮೇಲೆ ಕೈದಿಗಳಿಂದ ಹಲ್ಲೆಗೆ ಯತ್ನ, ಲಘು ಲಾಠಿ ಪ್ರಹಾರ!

ಪರಪ್ಪನ ಅಗ್ರಹಾರದಲ್ಲಿ ಹೈಡ್ರಾಮಾ: ಜೈಲಧಿಕಾರಿಗಳ ಮೇಲೆ ಕೈದಿಗಳಿಂದ ಹಲ್ಲೆಗೆ ಯತ್ನ, ಲಘು ಲಾಠಿ ಪ್ರಹಾರ!

ರಾಮು, ಆನೇಕಲ್​
| Edited By: |

Updated on: Apr 14, 2026 | 9:47 AM

Share

ಪರಪ್ಪನ ಅಗ್ರಹಾರ ಜೈಲಿನಲ್ಲಿ ತಪಾಸಣೆ ವೇಳೆ ಅಧಿಕಾರಿಗಳ ಮೇಲೆ ಹಲ್ಲೆಗೆ ಯತ್ನಿಸಿದ ಕೈದಿಗಳನ್ನು ಚದುರಿಸಲು ಜೈಲು ಸಿಬ್ಬಂದಿ ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ 10ಕ್ಕೂ ಹೆಚ್ಚು ಮೊಬೈಲ್‌ಗಳು ಪತ್ತೆಯಾಗಿದ್ದು, ಗಲಾಟೆ ಮಾಡಿದ ನಾಲ್ವರು ಕೈದಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಬೆಂಗಳೂರು, ಏಪ್ರಿಲ್ 14: ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳು ಮತ್ತು ಜೈಲು ಸಿಬ್ಬಂದಿ ನಡುವೆ ಸಂಘರ್ಷ ನಡೆದಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಮಾರ್ಚ್ 29ರ ತಡರಾತ್ರಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜೈಲಿನಿಂದಲೇ ವಿಡಿಯೋ ಮಾಡಿ ಹೊರಬಿಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಅಧೀಕ್ಷಕ ಕರ್ಣ ಕ್ಷತ್ರಿ ನೇತೃತ್ವದಲ್ಲಿ ವಿಚಾರಣಾ ಬಂಧಿಗಳ ವಿಭಾಗದ ಟವರ್-1ರಲ್ಲಿ ತಪಾಸಣೆ ನಡೆಸಲಾಗುತ್ತಿತ್ತು. ಈ ವೇಳೆ ತಪಾಸಣೆಗೆ ಅಡ್ಡಿಪಡಿಸಿದ ಕೈದಿಗಳಾದ ಇನಾಕ್ ಜಾಯ್, ವೋಕು ಆರೆಂಜಿ ಸೇರಿದಂತೆ ಇತರರು ಅಧಿಕಾರಿಗಳ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಸಿಬ್ಬಂದಿ ಕೈದಿಗಳನ್ನು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಕಾರ್ಯಾಚರಣೆ ವೇಳೆ ಬ್ಯಾರಕ್‌ಗಳಲ್ಲಿ ಅಡಗಿಸಿಟ್ಟಿದ್ದ 10ಕ್ಕೂ ಹೆಚ್ಚು ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಗಲಾಟೆ ಮಾಡಿದ ಕೈದಿಗಳ ವಿರುದ್ಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us