ರಾಬರಿ ಪ್ರಕರಣದ ಆರೋಪಿ ಹೈಡ್ರಾಮ: ಪೊಲೀಸರ ಮೇಲೆ ಹಲ್ಲೆ ಯತ್ನ!

Edited By:

Updated on: Apr 29, 2026 | 1:37 PM

ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಶಿವಾಜಿನಗರದಲ್ಲಿ ರಾಬರಿ ಪ್ರಕರಣವೊಂದರ ಸ್ಥಳ ಮಹಜರ್ ಸಂದರ್ಭದಲ್ಲಿ ಹೈಡ್ರಾಮಾ ನಡೆದಿದೆ. ಚಿಕ್ಕೋಡಿ ಠಾಣೆ ಪೊಲೀಸರು ಆರೋಪಿ ಧೀರಜ್‌ನನ್ನು ಸ್ಥಳ ಮಹಜರಿಗಾಗಿ ಕರೆತಂದಿದ್ದರು. ಈ ವೇಳೆ ಆರೋಪಿ ಧೀರಜ್, ತನ್ನನ್ನು ಸುಮ್ಮನೆ ಬಂದಿಸಲಾಗಿದೆ ಎಂದು ಕೂಗಾಡಲು ಆರಂಭಿಸಿದ್ದಾನೆ. ಆರೋಪಿಯ ಈ ಕೃತ್ಯದಿಂದ ಪರಿಸ್ಥಿತಿ ಉದ್ವಿಗ್ನಗೊಂಡಾಗ ಅಲ್ಲಿದ್ದ ಆರೋಪಿಯ ಸಂಬಂಧಿಕರು ಮತ್ತು ಸ್ನೇಹಿತರು ಸೇರಿಕೊಂಡು, ಸಿಪಿಐ ವಿಶ್ವನಾಥ ಚೌಗಲ್ ಹಾಗೂ ಪೇದೆಗಳ ಮೇಲೆ ಹಲ್ಲೆ ನಡೆಸಲು ಯತ್ನಿಸಿದ್ದಾರೆ.

ಬೆಳಗಾವಿ, ಏಪ್ರಿಲ್ 29: ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಶಿವಾಜಿನಗರದಲ್ಲಿ ರಾಬರಿ ಪ್ರಕರಣವೊಂದರ ಸ್ಥಳ ಮಹಜರ್ ಸಂದರ್ಭದಲ್ಲಿ ಹೈಡ್ರಾಮಾ ನಡೆದಿದೆ. ಚಿಕ್ಕೋಡಿ ಠಾಣೆ ಪೊಲೀಸರು ಆರೋಪಿ ಧೀರಜ್‌ನನ್ನು ಸ್ಥಳ ಮಹಜರಿಗಾಗಿ ಕರೆತಂದಿದ್ದರು. ಈ ವೇಳೆ ಆರೋಪಿ ಧೀರಜ್, ತನ್ನನ್ನು ಸುಮ್ಮನೆ ಬಂದಿಸಲಾಗಿದೆ ಎಂದು ಕೂಗಾಡಲು ಆರಂಭಿಸಿದ್ದಾನೆ.

ಆರೋಪಿಯ ಈ ಕೃತ್ಯದಿಂದ ಪರಿಸ್ಥಿತಿ ಉದ್ವಿಗ್ನಗೊಂಡಾಗ ಅಲ್ಲಿದ್ದ ಆರೋಪಿಯ ಸಂಬಂಧಿಕರು ಮತ್ತು ಸ್ನೇಹಿತರು ಸೇರಿಕೊಂಡು, ಸಿಪಿಐ ವಿಶ್ವನಾಥ ಚೌಗಲ್ ಹಾಗೂ ಪೇದೆಗಳ ಮೇಲೆ ಹಲ್ಲೆ ನಡೆಸಲು ಯತ್ನಿಸಿದ್ದಾರೆ. ರಾಬರಿ ಪ್ರಕರಣದ ತನಿಖೆಗಾಗಿ ಕೊಲ್ಲಾಪುರಕ್ಕೆ ತೆರಳಿದ್ದ ಚಿಕ್ಕೋಡಿ ಪೊಲೀಸರು ಈ ಅನಿರೀಕ್ಷಿತ ಹಲ್ಲೆ ಯತ್ನದಿಂದ ಕೆಲಕಾಲ ಗೊಂದಲಕ್ಕೊಳಗಾಗಿದ್ದರು. ಆದಾಗ್ಯೂ, ಕ್ಷಣಾರ್ಧದಲ್ಲಿ ಪೊಲೀಸರು ಪರಿಸ್ಥಿತಿಯನ್ನು ನಿಭಾಯಿಸಿ ಹಲ್ಲೆಯಿಂದ ಪಾರಾಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Apr 29, 2026 01:36 PM
Loading...
Unable to load recommendations.
Follow Us
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More