AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಹೈಡ್ರಾಮಾ: ಅಧ್ಯಕ್ಷರ ಆಯ್ಕೆ ಸಭೆಯಲ್ಲಿ ಕಾರ್ಯಕರ್ತರ ಗಲಾಟೆ!

ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಹೈಡ್ರಾಮಾ: ಅಧ್ಯಕ್ಷರ ಆಯ್ಕೆ ಸಭೆಯಲ್ಲಿ ಕಾರ್ಯಕರ್ತರ ಗಲಾಟೆ!

ಭಾವನಾ ಹೆಗಡೆ
|

Updated on: Jul 27, 2026 | 4:07 PM

Share

ಇಲ್ಲಿನ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ನಗರ ಅಧ್ಯಕ್ಷರ ಆಯ್ಕೆ ಸಂಬಂಧ ನಡೆದ ಅಭಿಪ್ರಾಯ ಸಂಗ್ರಹ ಸಭೆ ರಣರಂಗವಾಗಿ ಮಾರ್ಪಟ್ಟಿದೆ. ಎಐಸಿಸಿ ವೀಕ್ಷಕ ಮನೋಜ್ ಚವ್ಹಾಣ್ ಅವರ ನೇತೃತ್ವದಲ್ಲಿ ಸಭೆ ನಡೆಯುತ್ತಿದ್ದಾಗಲೇ ನಗರ ಅಧ್ಯಕ್ಷ ಸ್ಥಾನಕ್ಕಾಗಿ ಕಾರ್ಯಕರ್ತರು ಕೈಕೈ ಮಿಲಾಯಿಸಿದ್ದಾರೆ. ವೀಕ್ಷಕರ ಎದುರಲ್ಲೇ ನಾಯಕರು ಹಾಗೂ ಕಾರ್ಯಕರ್ತರು ತೀವ್ರ ಗದ್ದಲ ಎಬ್ಬಿಸಿದ್ದು, ಮಾಜಿ ಶಾಸಕ ರಮೇಶ್ ಕುಡಚಿ ಆಪ್ತ ಹೇಮಂತ್ ಲಿಂಗಾಡೆ ಎಂಬಾತನ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಹೈಡ್ರಾಮಾದಿಂದಾಗಿ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ತಕ್ಷಣವೇ ಸ್ಥಳಕ್ಕೆ ಧಾವಿಸಿದ ಮಾರ್ಕೆಟ್ ಠಾಣೆಯ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದರು.

ಬೆಳಗಾವಿ, ಜುಲೈ 27: ಇಲ್ಲಿನ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ನಗರ ಅಧ್ಯಕ್ಷರ ಆಯ್ಕೆ ಸಂಬಂಧ ನಡೆದ ಅಭಿಪ್ರಾಯ ಸಂಗ್ರಹ ಸಭೆ ರಣರಂಗವಾಗಿ ಮಾರ್ಪಟ್ಟಿದೆ. ಎಐಸಿಸಿ ವೀಕ್ಷಕ ಮನೋಜ್ ಚವ್ಹಾಣ್ ಅವರ ನೇತೃತ್ವದಲ್ಲಿ ಸಭೆ ನಡೆಯುತ್ತಿದ್ದಾಗಲೇ ನಗರ ಅಧ್ಯಕ್ಷ ಸ್ಥಾನಕ್ಕಾಗಿ ಕಾರ್ಯಕರ್ತರು ಕೈಕೈ ಮಿಲಾಯಿಸಿದ್ದಾರೆ. ವೀಕ್ಷಕರ ಎದುರಲ್ಲೇ ನಾಯಕರು ಹಾಗೂ ಕಾರ್ಯಕರ್ತರು ತೀವ್ರ ಗದ್ದಲ ಎಬ್ಬಿಸಿದ್ದು, ಮಾಜಿ ಶಾಸಕ ರಮೇಶ್ ಕುಡಚಿ ಆಪ್ತ ಹೇಮಂತ್ ಲಿಂಗಾಡೆ ಎಂಬಾತನ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಹೈಡ್ರಾಮಾದಿಂದಾಗಿ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ತಕ್ಷಣವೇ ಸ್ಥಳಕ್ಕೆ ಧಾವಿಸಿದ ಮಾರ್ಕೆಟ್ ಠಾಣೆಯ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us