ಗಣೇಶೋತ್ಸವ ವಿವಾದ: ಮೈಸೂರಿನ ಟಿ. ನರಸೀಪುರದಲ್ಲಿ ಭಾರಿ ಹೈಡ್ರಾಮಾ
ಮೈಸೂರಿನ ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆ ಸಂಬಂಧ ಇನ್ಸ್‌ಪೆಕ್ಟರ್ ಎಚ್ಚರಿಕೆ ಖಂಡಿಸಿ ಬಿಜೆಪಿ ಹಾಗೂ ಪ್ರತಾಪ್ ಸಿಂಹ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆಯಿಂದ ಹೈಡ್ರಾಮಾ ನಡೆದಿದ್ದು, ಯಾವುದೇ ಹೊಸ ನಿಯಮ ಹೇರಿಲ್ಲವೆಂದು ಎಸ್‌ಪಿ ಸ್ಪಷ್ಟಪಡಿಸಿದ್ದಾರೆ. ಇನ್ಸ್‌ಪೆಕ್ಟರ್ ಶಾಂತಿ ಸಭೆಯಲ್ಲಿ ಮಾತನಾಡಿದ ಮಾತುಗಳನ್ನು ತಪ್ಪಾಗಿ ಅರ್ಥೈಸಲಾಗಿದೆ. ಕಳೆದ ವರ್ಷದ ಒಂದು ಘಟನೆಯನ್ನು ಉಲ್ಲೇಖಿಸಿ ಇನ್ಸ್‌ಪೆಕ್ಟರ್ ಎಚ್ಚರಿಕೆ ನೀಡಿದ್ದರೂ, ಯಾವುದೇ ರೀತಿಯ ನಿರ್ಬಂಧಗಳನ್ನು ವಿಧಿಸಲಾಗಿಲ್ಲ ಎಂದು ಎಸ್‌ಪಿ ಸ್ಪಷ್ಟಪಡಿಸಿದ್ದಾರೆ.
ಮೈಸೂರು, ಸೆಪ್ಟೆಂಬರ್ 13: ಟಿ. ನರಸೀಪುರದಲ್ಲಿ ಗಣೇಶ ಪ್ರತಿಷ್ಠಾಪನೆ ಮತ್ತು ಮೆರವಣಿಗೆಗೆ ಸಂಬಂಧಿಸಿದಂತೆ ಇನ್ಸ್‌ಪೆಕ್ಟರ್ ನೀಡಿದ ಎಚ್ಚರಿಕೆಯು ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಇನ್ಸ್‌ಪೆಕ್ಟರ್ ಹಿಂದೂ ಕಾರ್ಯಕರ್ತರಿಗೆ ಧಮ್ಕಿ ಹಾಕಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಇನ್ಸ್‌ಪೆಕ್ಟರ್ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ ಈ ನಡುವೆ, ಮಾಜಿ ಸಂಸದ ಪ್ರತಾಪ್ ಸಿಂಹ ಅವರ ಹೇಳಿಕೆ ಖಂಡಿಸಿ ದಲಿತಪರ ಸಂಘಟನೆಗಳು ಮಾಜಿ ಸಂಸದರ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿವೆ. ಹೀಗಾಗಿ ಟಿ. ನರಸೀಪುರದಲ್ಲಿ ಭಾರಿ ಹೈಡ್ರಾಮಾ ನಡೆದಿದೆ. ಮತ್ತೊಂದೆಡೆ ಗಣೇಶೋತ್ಸವ ಮೆರವಣಿಗೆ ಸಂಬಂಧ ಪ್ರತಿಕ್ರಿಯಿಸಿರುವ ಮೈಸೂರು ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ, ಈ ಬಾರಿಯ ಗಣೇಶೋತ್ಸವಕ್ಕೆ ಯಾವುದೇ ಹೊಸ ನಿಯಮಗಳನ್ನು ಜಾರಿಗೊಳಿಸಿಲ್ಲ. ಇನ್ಸ್‌ಪೆಕ್ಟರ್ ಶಾಂತಿ ಸಭೆಯಲ್ಲಿ ಮಾತನಾಡಿದ ಮಾತುಗಳನ್ನು ತಪ್ಪಾಗಿ ಅರ್ಥೈಸಲಾಗಿದೆ. ಗಣೇಶ ಮಂಡಳಿಗಳು ಹಿಂದಿನಿಂದಲೂ ಪಾಲಿಸುತ್ತಾ ಬಂದಿರುವ ಮಾರ್ಗಗಳು ಮತ್ತು ನಿಯಮಗಳನ್ನೇ ಈ ಬಾರಿಯೂ ಅನುಸರಿಸಬಹುದು ಎಂದು ಅವರು ತಿಳಿಸಿದ್ದಾರೆ. ಕಳೆದ ವರ್ಷದ ಒಂದು ಘಟನೆಯನ್ನು ಉಲ್ಲೇಖಿಸಿ ಇನ್ಸ್‌ಪೆಕ್ಟರ್ ಎಚ್ಚರಿಕೆ ನೀಡಿದ್ದರೂ, ಯಾವುದೇ ರೀತಿಯ ನಿರ್ಬಂಧಗಳನ್ನು ವಿಧಿಸಲಾಗಿಲ್ಲ ಎಂದು ಎಸ್‌ಪಿ ಸ್ಪಷ್ಟಪಡಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.

