ಅರಬ್ಬೀ ಸಮುದ್ರದಲ್ಲಿ ಭಾರೀ ಅಲೆಗಳು: ಮಂಗಳೂರಿನ ಎಲ್ಲಾ ಬೀಚ್ಗಳಿಗೆ ನಿರ್ಬಂಧ
ಮಂಗಳೂರಿನ ಬೀಚ್ಗಳೆಲ್ಲ ಖಾಲಿ ಖಾಲಿಯಾಗಿವೆ. ಭಾರತೀಯ ಹವಾಮಾನ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದ್ದು, ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಅಷ್ಟೇ ಅಲ್ಲದೆ, ಸಮುದ್ರ ಪ್ರಕ್ಷುಬ್ಧಗೊಂಡಿದೆ. ಹೀಗಾಗಿ ಮಂಗಳೂರಿನ ಎಲ್ಲ ಬೀಚ್ಗಳಿಗೆ ಎಂಟ್ರಿ ನಿಷೇಧಿಸಲಾಗಿದೆ.
ಮಂಗಳೂರು, ಜೂನ್ 18: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ತುಸು ಬಿಡುವು ನೀಡಿದೆ. ಆದಾಗ್ಯೂ, ಅರಬ್ಬೀ ಸಮುದ್ರದಲ್ಲಿ ಅಲೆಗಳ ಅಬ್ಬರ ಜೋರಾಗಿದೆ. ಹೀಗಾಗಿ ತಣ್ಣೀರು ಬಾವಿ ಸೇರಿದಂತೆ ಮಂಗಳೂರಿನ ಎಲ್ಲ ಬೀಚ್ಗಳಲ್ಲಿ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಲೈಫ್ ಗಾರ್ಡ್ ಸಿಬ್ಬಂದಿ ಕೂಡ ಬೀಚ್ಗಳಲ್ಲಿ ಮೊಕ್ಕಾಂ ಹೂಡಿದ್ದಾರೆ. ಜಿಲ್ಲೆಯಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos

