ಅರಬ್ಬೀ ಸಮುದ್ರದಲ್ಲಿ ಭಾರೀ ಅಲೆಗಳು: ಮಂಗಳೂರಿನ ಎಲ್ಲಾ ಬೀಚ್​ಗಳಿಗೆ ನಿರ್ಬಂಧ

Edited By:

Updated on: Jun 18, 2025 | 11:55 AM

ಮಂಗಳೂರಿನ ಬೀಚ್​ಗಳೆಲ್ಲ ಖಾಲಿ ಖಾಲಿಯಾಗಿವೆ. ಭಾರತೀಯ ಹವಾಮಾನ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದ್ದು, ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಅಷ್ಟೇ ಅಲ್ಲದೆ, ಸಮುದ್ರ ಪ್ರಕ್ಷುಬ್ಧಗೊಂಡಿದೆ. ಹೀಗಾಗಿ ಮಂಗಳೂರಿನ ಎಲ್ಲ ಬೀಚ್​​ಗಳಿಗೆ ಎಂಟ್ರಿ ನಿಷೇಧಿಸಲಾಗಿದೆ.

ಮಂಗಳೂರು, ಜೂನ್ 18: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ತುಸು ಬಿಡುವು ನೀಡಿದೆ. ಆದಾಗ್ಯೂ, ಅರಬ್ಬೀ ಸಮುದ್ರದಲ್ಲಿ ಅಲೆಗಳ ಅಬ್ಬರ ಜೋರಾಗಿದೆ. ಹೀಗಾಗಿ ತಣ್ಣೀರು ಬಾವಿ ಸೇರಿದಂತೆ ಮಂಗಳೂರಿನ ಎಲ್ಲ ಬೀಚ್​​ಗಳಲ್ಲಿ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಲೈಫ್ ಗಾರ್ಡ್ ಸಿಬ್ಬಂದಿ ಕೂಡ ಬೀಚ್​​ಗಳಲ್ಲಿ ಮೊಕ್ಕಾಂ ಹೂಡಿದ್ದಾರೆ. ಜಿಲ್ಲೆಯಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More