ಅಲ್ಲಾವುದ್ದೀನನ ಅದ್ಭುತ ದೀಪದಿಂದ ಎದ್ದುಬಂದಂತೆ ಮತ್ತೆ ಹಿಜಾಬ್​ vs ಸಮವಸ್ತ್ರ ವಿವಾದ ಎದ್ದಿದೆ -ಮುಂದೇನು? -ಟಿವಿ 9 ಕನ್ನಡ ಡಿಜಿಟಲ್​ ಲೈವ್​ ಚರ್ಚೆ

| Updated By: ಸಾಧು ಶ್ರೀನಾಥ್​

Updated on: May 27, 2022 | 3:37 PM

ಹೊಸ ಶೈಕ್ಷಣಿಕ ವರ್ಷ ಪ್ರಾರಂಭವಾಗಿದೆ. ಮತ್ತೆ ಸಮವಸ್ತ್ರ vs ಹಿಜಾಬ್ ವಿವಾದ ಪ್ರಾರಂಭವಾಗಿದೆ. ಈ ಕುರಿತಾದ ಚರ್ಚೆಯನ್ನು ಆ್ಯಂಕರ್​ ಚಂದ್ರಮೋಹನ್​ ಇಂದಿನ ಡಿಜಿಟಲ್​ ಲೈವ್​ನಲ್ಲಿ ನಡೆಸಿಕೊಡಲಿದ್ದಾರೆ. ಮಧ್ಯಾಹ್ನ 3.30 ಕ್ಕೆ ನಡೆಯುವ ಈ ಕಾರ್ಯಕ್ರಮಕ್ಕೆ ನಿಮಗೆ ಸ್ವಾಗತ. TV 9 Kannada Digital Live

ಹಿಜಾಬ್​ vs ಸಮವಸ್ತ್ರ ವಿವಾದ (Hijab row) ಕಳೆದ ಶೈಕ್ಷಣಿಕ ವರ್ಷದೊಂದಿಗೆ ಅಂತ್ಯವಾಯಿತು ಎಂದು ಬಗೆದಿದ್ದವರಿಗೆ ಆಶ್ಚರ್ಯ, ಆಘಾತದೊಂದಿಗೆ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ಅಲ್ಲಾವುದ್ದೀನನ ಅದ್ಭುತ ದೀಪದಿಂದ ಎದ್ದುಬಂದಂತೆ ಮತ್ತೆ ಧುತ್ತನೆ ಎದ್ದಿದೆ ಹಿಜಾಬ್​ vs ಸಮವಸ್ತ್ರ -ಮುಂದೇನು? ಎಂಬ ಪ್ರಶ್ನೆ ಸದ್ಯ ಕಾಡಲಾರಂಭಿಸಿದೆ (hindu, muslim).

ಹೊಸ ಶೈಕ್ಷಣಿಕ ವರ್ಷ ಪ್ರಾರಂಭವಾಗಿದೆ. ಮತ್ತೆ ಸಮವಸ್ತ್ರ vs ಹಿಜಾಬ್ ವಿವಾದ ಪ್ರಾರಂಭವಾಗಿದೆ. ಈ ಕುರಿತಾದ ಚರ್ಚೆಯನ್ನು ಆ್ಯಂಕರ್​ ಚಂದ್ರಮೋಹನ್​ ಇಂದಿನ ಡಿಜಿಟಲ್​ ಲೈವ್​ನಲ್ಲಿ ನಡೆಸಿಕೊಡಲಿದ್ದಾರೆ. ಮಧ್ಯಾಹ್ನ 3.30 ಕ್ಕೆ ನಡೆಯುವ ಈ ಕಾರ್ಯಕ್ರಮಕ್ಕೆ ನಿಮಗೆ ಸ್ವಾಗತ. TV 9 Kannada Digital Live

ಮತ್ತೆ ಶುರುವಾದ ಹಿಜಾಬ್ ವಿವಾದ; ತರಗತಿಗಳಲ್ಲಿ ಮಾತ್ರವಲ್ಲ, ಕ್ಯಾಂಪಸ್​ನಲ್ಲೂ ಹಿಜಾಬ್​ಗೆ ಅವಕಾಶವಿಲ್ಲ ಎಂದು ಸ್ಪಷ್ಟ ಪಡಿಸಿದ ಮಂಗಳೂರು ವಿವಿ ಪ್ರಾಂಶುಪಾಲೆ ಅನುಸೂಯ ರೈ
ಮಂಗಳೂರು: ಕೆಲ ತಿಂಗಳ ಹಿಂದೆ ಕರಾವಳಿ ಹೊತ್ತಿಕೊಂಡ ಹಿಜಾಬ್ ದಂಗಲ್ ರಾಜ್ಯಾದ್ಯಂತ ಧಗಧಗಿಸಿತ್ತು. ಕೋರ್ಟ್ ಆದೇಶದ ಬಳಿಕ ಬೂದಿ ಮುಚ್ಚಿದ ಕೆಂಡದಂತಾಗಿದ್ದ ಕೇಸ್ ಈಗ ಮತ್ತೆ ಧಗಧಗಿಸೋಕೆ ಆರಂಭಿಸಿದೆ. ಮತ್ತದೇ ಕರಾವಳಿಯಲ್ಲಿ ಹಿಜಾಬ್ ವಿವಾದ ಶುರುವಾಗಿದೆ. ಮೇ 10ರಂದು ಮಂಗಳೂರಿನ ವಿವಿ ಘಟಕ ಡಿಗ್ರಿ ಕಾಲೇಜಿನಲ್ಲಿ ಹಿಜಾಬ್ ವಿವಾದದ ಕಿಡಿ ಹೊತ್ತಿಕೊಂಡಿತ್ತು. ಪೋಷಕರ ಸಭೆಯಲ್ಲಿ ಹಿಜಾಬ್ ಧರಿಸದಂತೆ ಮೌಖಿಕವಾಗಿ ಸೂಚಿಸಲಾಗಿತ್ತಾದ್ರೂ, ಕಾಲೇಜು ಆಡಳಿತ ಮಂಡಳಿ ಯಾವುದೇ ಆದೇಶ ಜಾರಿ ಮಾಡಿರಲಿಲ್ಲ. ಇದ್ರಿಂದ ರೊಚ್ಚಿಗೆದ್ದ ಹಿಂದೂ ವಿದ್ಯಾರ್ಥಿಗಳು ಹೋರಾಟಕ್ಕೆ ಇಳಿದಿದ್ರು. ಇದಾದ ಬಳಿಕ ಅನೇಕ ಬೆಳವಣಿಗೆಗಳಾಗಿದ್ದು ಸದ್ಯ ಈ ಬಗ್ಗೆ ಸಭೆಗಳು, ಚರ್ಚೆಗಳು ನಡೆಯುತ್ತಿವೆ.

ಇನ್ನು ಮಂಗಳೂರಿನ ಹಂಪನಕಟ್ಟೆ ಕಾಲೇಜಿನಲ್ಲಿ ಹಿಜಾಬ್ ವಿವಾದಕ್ಕೆ ಸಂಬಂಧಿಸಿ ಹಿಜಾಬ್ ಧರಿಸಿ ಬಂದರೆ ಕಾಲೇಜಿಗೆ ಸೇರಿಸುವುದಿಲ್ಲ ಎಂದು ಮಂಗಳೂರಿನಲ್ಲಿ ಟಿವಿ9ಗೆ ಶಾಸಕ ವೇದವ್ಯಾಸ ಕಾಮತ್ ತಿಳಿಸಿದ್ದಾರೆ. ಹಿಜಾಬ್ ವಿವಾದದ ಹಿಂದೆ ಹಲವು ಪಕ್ಷಗಳ ಕೈವಾಡ ಇದೆ. ಎಸ್ಡಿಪಿಐ, ಕಾಂಗ್ರೆಸ್, ಕಮ್ಯೂನಿಸ್ಟ್ ಪಕ್ಷಗಳ ಕೈವಾಡ ಇದೆ. ಹಿಜಾಬ್ ಮೂಲಕ ರಾಜ್ಯ ಸರ್ಕಾರಕ್ಕೆ ಮುಜುಗರ ತರುವ ಯತ್ನ ನಡೆಯುತ್ತಿದೆ. ಕಾನೂನು ಪಾಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡುತ್ತೇವೆ ಎಂದು ಹೇಳಿದ್ದಾರೆ. ಇನ್ನು ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಜೊತೆ ಹೋಗಿರುವ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ಅವರು, DC ಅಲ್ಲ ಕಾಂಗ್ರೆಸ್ನ ಸಿಎಂ ಇದ್ರೂ ಅವಕಾಶ ಕೊಡಲು ಸಾಧ್ಯವಿಲ್ಲ. ಹಿಜಾಬ್ ಧರಿಸಲು ಕೆಲ ಅಧ್ಯಾಪಕರ ಕುಮ್ಮಕ್ಕು ಆರೋಪವಿದೆ. ಅಂತಹವರ ವಿರುದ್ಧ ಕ್ರಮಕೈಗೊಳ್ಳುವಂತೆ ಇಲಾಖೆಗೆ ಸೂಚಿಸಿದ್ದೇವೆ. ಮಂಗಳೂರು ವಿವಿಯನ್ನು ಜೆಎನ್ಯು ರೀತಿ ಮಾಡಲು ಬಿಡಲ್ಲ. ನ್ಯಾಯಾಲಯ, ಕಾನೂನಿಗೆ ಗೌರವ ನೀಡಿ ಕಾಲೇಜಿಗೆ ಬನ್ನಿ. ಉಳಿದ ವಿಚಾರವನ್ನು ವಿದ್ಯಾರ್ಥಿಗಳ ಪೋಷಕರಿಗೆ ಬಿಟ್ಟಿದ್ದು ಎಂದರು.

ತರಗತಿಗಳಲ್ಲಿ ಮಾತ್ರವಲ್ಲ, ಕ್ಯಾಂಪಸ್ನಲ್ಲೂ ಹಿಜಾಬ್ಗೆ ಅವಕಾಶವಿಲ್ಲ ತರಗತಿಗಳಲ್ಲಿ ಮಾತ್ರವಲ್ಲ, ಕ್ಯಾಂಪಸ್ನಲ್ಲೂ ಹಿಜಾಬ್ಗೆ ಅವಕಾಶವಿಲ್ಲ ಎಂದು ಟಿವಿ9ಗೆ ಮಂಗಳೂರು ವಿವಿ ಪ್ರಾಂಶುಪಾಲೆ ಅನುಸೂಯ ರೈ ಸ್ಪಷ್ಟಪಡಿಸಿದ್ದಾರೆ. ನಮ್ಮಲ್ಲಿ 44 ಜನ ಮುಸ್ಲಿಂ ವಿದ್ಯಾರ್ಥಿನಿಯರಿದ್ದಾರೆ. ಕೆಲ ವಿದ್ಯಾರ್ಥಿಗಳಿಗೆ ಮಾತ್ರ ಈ ಆದೇಶದ ಬಗ್ಗೆ ಸಮಸ್ಯೆ ಇದೆ. ಅವರನ್ನು ಅವರ ಪೋಷಕರ ಮನವೊಲಿಸಲು ನಮಗೆ ಸಮಯ ಬೇಕು. ಅವರು ನ್ಯಾಯಾಲಯದ ಆದೇಶ ಆಡಳಿತ ಮಂಡಳಿಯಿಂದ ನಿಯಮವನ್ನು ಪಾಲಿಸಲೇ ಬೇಕು. ಆಡಳಿತ ಮಂಡಳಿ ಆದೇಶ ಹಿಂದಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ. ಅನೇಕ ಶಾಸಕರು ಕರೆ ಮಾಡಿದ್ದಾರೆ ನನಗೆ ಯಾರು ಒತ್ತಡ ಹಾಕಿಲ್ಲ. ಕೇವಲ ನಮ್ಮ ಆದೇಶದ ಬಗ್ಗೆ ಮಾಹಿತಿ ಪಡೆದಿದ್ದಾರೆ ಎಂದು ಪ್ರಾಂಶುಪಾಲರಾದ ಅನುಸೂಯ ರೈ ತಿಳಿಸಿದ್ದಾರೆ.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Also Read:

ಸಖೇದಾಶ್ಚರ್ಯದ ಸಂಗತಿ: ನಿಮಿಷಾಂಭ ದೇಗುಲ ಬಳಿ ಕಾವೇರಿ ನದಿಯಲ್ಲಿ ದುಬಾರಿ ಬೆಲೆಯ ಬೆಂಗಳೂರಿನ ಬಿಎಂಡಬ್ಲ್ಯೂ ಕಾರು ಪತ್ತೆ!

ಗುಬ್ಬಿ ಜೆಡಿಎಸ್ ಶಾಸಕ​​ಗೆ ಹೆಚ್​​ಡಿ ಕುಮಾರಸ್ವಾಮಿ ಫೋನ್ ಕಾಲ್, ಮನವೊಲಿಕೆ ಯತ್ನ: ಆದರೆ ಮಾರ್ಮಿಕ ಪ್ರಶ್ನೆ ಎತ್ತಿದ ಶ್ರೀನಿವಾಸ್

Published On - 3:34 pm, Fri, 27 May 22

Follow us on