Video: ಇದೇನ್ ಮಾಡಿದ್ರಿ? ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಕಾರ್ಯಕ್ರಮವೊಂದರಲ್ಲಿ ವೇದಿಕೆ ಮೇಲೆ ವೈದ್ಯೆಯ ಹಿಜಾಬ್ ಎಳೆದಿರುವ ಘಟನೆ ನಡೆದಿದ್ದು, ತೀವ್ರ ವಿರೋಧ ವ್ಯಕ್ತವಾಗಿದೆ. ನಿತೀಶ್ ಕುಮಾರ್ 10ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರ ಮಾನಸಿಕ ಆರೋಗ್ಯದ ಬಗ್ಗೆ ವಿರೋಧಪಕ್ಷ ಪ್ರಶ್ನೆಗಳನ್ನೆತ್ತಿದೆ. ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ವೈದ್ಯರಿಗೆ ಪ್ರಮಾಣಪತ್ರ ಹಸ್ತಾಂತರಿಸುವಾಗ ಮೊದಲು ವೈದ್ಯೆಗೆ ಹಿಜಾಬ್ ತೆಗೆಯುವಂತೆ ಸನ್ನೆ ಮಾಡಿ ಬಳಿಕ ಅವರೇ ಕೈಯಿಂದ ನಖಾಬ್ ಕೆಳಗಿಳಿಸಿದ್ದಾರೆ. ಕೆಲವರು ನಗುತ್ತಿದ್ದರೆ, ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ನಿತೀಶ್ ಅವರನ್ನು ತಡೆಯಲು ಪ್ರಯತ್ನಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.
ಪಾಟ್ನಾ, ಡಿಸೆಂಬರ್ 16: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಕಾರ್ಯಕ್ರಮವೊಂದರಲ್ಲಿ ವೇದಿಕೆ ಮೇಲೆ ವೈದ್ಯೆಯ ಹಿಜಾಬ್ ಎಳೆದಿರುವ ಘಟನೆ ನಡೆದಿದ್ದು, ತೀವ್ರ ವಿರೋಧ ವ್ಯಕ್ತವಾಗಿದೆ. ನಿತೀಶ್ ಕುಮಾರ್ 10ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರ ಮಾನಸಿಕ ಆರೋಗ್ಯದ ಬಗ್ಗೆ ವಿರೋಧಪಕ್ಷ ಪ್ರಶ್ನೆಗಳನ್ನೆತ್ತಿದೆ.
ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ವೈದ್ಯರಿಗೆ ಪ್ರಮಾಣಪತ್ರ ಹಸ್ತಾಂತರಿಸುವಾಗ ಮೊದಲು ವೈದ್ಯೆಗೆ ಹಿಜಾಬ್ ತೆಗೆಯುವಂತೆ ಸನ್ನೆ ಮಾಡಿ ಬಳಿಕ ಅವರೇ ಕೈಯಿಂದ ನಖಾಬ್ ಕೆಳಗಿಳಿಸಿದ್ದಾರೆ. ಕೆಲವರು ನಗುತ್ತಿದ್ದರೆ, ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ನಿತೀಶ್ ಅವರನ್ನು ತಡೆಯಲು ಪ್ರಯತ್ನಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.
ಕಾಂಗ್ರೆಸ್ ಇದನ್ನು ನೀಚ ಕೃತ್ಯ ಎಂದು ಕರೆದಿದೆ, ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಲಾಗಿದೆ. ಅವರ ಮಾನಸಿಕ ಆರೋಗ್ಯ ಕ್ಷೀಣಿಸುತ್ತಿರುದಕ್ಕೆ ಇದು ಸಾಕ್ಷಿ ಎಂದು ಹೇಳಿವೆ.
ನವೆಂಬರ್‌ನಲ್ಲಿ ನಡೆದ ಬಿಹಾರ ಚುನಾವಣೆಗೆ ವಾರಗಳ ಮೊದಲು, ಜೆಡಿಯು ಮತ್ತು ಬಿಜೆಪಿ ಭರ್ಜರಿ ಜಯ ಸಾಧಿಸಿದ್ದವು. ಸಾರ್ವಜನಿಕ ಸಭೆಯಲ್ಲಿ ಮಹಿಳೆಯೊಬ್ಬರಿಗೆ ಹಾರ ಹಾಕುತ್ತಿರುವ ವಿಡಿಯೋ ವೈರಲ್ ಆದ ನಂತರ ಕುಮಾರ್ ಅವರ ವಿರುದ್ಧ ಟೀಕೆಗಳು ಕೇಳಿ ಬಂದಿದ್ದವು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ