ಹಾವೇರಿ: ಹಿಜಾಬ್ Vs ಕೇಸರಿ ಶಾಲು; ಮತ್ತೆ ಮುನ್ನೆಲೆಗೆ ಬಂದ ವಿವಾದ
ರಾಜ್ಯದಲ್ಲಿ ಕೆಲ ದಿನಗಳಿಂದ ತಣ್ಣಗಾಗಿದ್ದ ಹಿಜಾಬ್ ವರ್ಸಸ್ ಕೇಸರಿ ಶಾಲು ವಿವಾದ ಮತ್ತೆ ಸದ್ದು ಮಾಡಿದೆ. ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಬರ್ತಿರುವ ಹಿನ್ನೆಲೆ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿಕೊಂಡು ಕಾಲೇಜಿಗೆ ಬಂದ ಘಟನೆ ಹಾವೇರಿಯಲ್ಲಿ ನಡೆದಿದೆ. ಕೇಸರಿ ಶಾಲು ಹಾಕಿಕೊಂಡು ಕ್ಲಾಸ್ರೂಮ್ನಲ್ಲಿಯೇ ವಿದ್ಯಾರ್ಥಿಗಳು ಕೂತಿದ್ದಾರೆ.
ಹಾವೇರಿ, ಡಿಸೆಂಬರ್ 04: ರಾಜ್ಯದಲ್ಲಿ ಹಿಜಾಬ್ ವರ್ಸಸ್ ಕೇಸರಿ ಶಾಲು ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಬರ್ತಿರುವ ಹಿನ್ನೆಲೆ ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿಕೊಂಡು ಕಾಲೇಜಿಗೆ ಬಂದ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಅಕ್ಕಿಆಲೂರು ತಾಲೂಕಿನ ಸಿ.ಜಿ. ಬೆಲ್ಲದ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದಿದೆ. ನಿತ್ಯವೂ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬರ್ತಿದ್ದ ಹಿನ್ನಲೆ ಇದಕ್ಕೆ ಪ್ರತೀಕಾರವಾಗಿ ನೂರಾರು ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿ ಬಂದಿದ್ದಾರೆ. ಕೇಸರಿ ಶಾಲು ಹಾಕಿಕೊಂಡು ಕ್ಲಾಸ್ರೂಮ್ನಲ್ಲಿಯೇ ವಿದ್ಯಾರ್ಥಿಗಳು ಕೂತಿದ್ದಾರೆ. ಹಲವು ದಿನಗಳಿಂದ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬರುತ್ತಿದ್ದರೂ ಈವರೆಗೆ ಕಾಲೇಜಿನ ಆಡಳಿತ ಮಂಡಳಿ ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿ ಬಂದಿದ್ದಾರೆ ಎನ್ನಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
ಚಿನ್ನದಂಗಡಿ ದೋಚಿ ಬಸ್ ಸ್ಟ್ಯಾಂಡ್ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ

