ಹಾವೇರಿ: ಹಿಜಾಬ್ Vs ಕೇಸರಿ ಶಾಲು; ಮತ್ತೆ ಮುನ್ನೆಲೆಗೆ ಬಂದ ವಿವಾದ

Updated on: Dec 04, 2025 | 5:06 PM

ರಾಜ್ಯದಲ್ಲಿ ಕೆಲ ದಿನಗಳಿಂದ ತಣ್ಣಗಾಗಿದ್ದ ಹಿಜಾಬ್ ವರ್ಸಸ್ ಕೇಸರಿ ಶಾಲು ವಿವಾದ ಮತ್ತೆ ಸದ್ದು ಮಾಡಿದೆ. ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಬರ್ತಿರುವ ಹಿನ್ನೆಲೆ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿಕೊಂಡು ಕಾಲೇಜಿಗೆ ಬಂದ ಘಟನೆ ಹಾವೇರಿಯಲ್ಲಿ ನಡೆದಿದೆ. ಕೇಸರಿ ಶಾಲು ಹಾಕಿಕೊಂಡು ಕ್ಲಾಸ್​​ರೂಮ್​ನಲ್ಲಿಯೇ ವಿದ್ಯಾರ್ಥಿಗಳು ಕೂತಿದ್ದಾರೆ.

ಹಾವೇರಿ, ಡಿಸೆಂಬರ್​​ 04: ರಾಜ್ಯದಲ್ಲಿ ಹಿಜಾಬ್ ವರ್ಸಸ್ ಕೇಸರಿ ಶಾಲು ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಬರ್ತಿರುವ ಹಿನ್ನೆಲೆ ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿಕೊಂಡು ಕಾಲೇಜಿಗೆ ಬಂದ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಅಕ್ಕಿಆಲೂರು ತಾಲೂಕಿನ ಸಿ.ಜಿ. ಬೆಲ್ಲದ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದಿದೆ. ನಿತ್ಯವೂ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬರ್ತಿದ್ದ ಹಿನ್ನಲೆ ಇದಕ್ಕೆ ಪ್ರತೀಕಾರವಾಗಿ ನೂರಾರು ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿ ಬಂದಿದ್ದಾರೆ. ಕೇಸರಿ ಶಾಲು ಹಾಕಿಕೊಂಡು ಕ್ಲಾಸ್​​ರೂಮ್​ನಲ್ಲಿಯೇ ವಿದ್ಯಾರ್ಥಿಗಳು ಕೂತಿದ್ದಾರೆ. ಹಲವು ದಿನಗಳಿಂದ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬರುತ್ತಿದ್ದರೂ ಈವರೆಗೆ ಕಾಲೇಜಿನ ಆಡಳಿತ ಮಂಡಳಿ ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿ ಬಂದಿದ್ದಾರೆ ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More