ಚಿಕ್ಕಮಗಳೂರಿನ ಹಲವೆಡೆ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ

Edited By:

Updated on: Jan 13, 2026 | 7:30 PM

ವರ್ಷದ ಮೊದಲ ಮಳೆಗೆ ಚಿಕ್ಕಮಗಳೂರು ಮಂದಿ ಕಂಗಾಲಾಗಿದ್ದಾರೆ. ಏಕಾಏಕಿ ವರುಣ ಅಬ್ಬರಿಸಿದ್ದು, ಒಣ‌ ಹಾಕಿದ ಕಾಫಿ ಮಳೆಯಿಂದ ಸಂಪೂರ್ಣ ನೆನೆದು ಹಾಳಾಗಿದೆ. ಕೆಲವೆಡೆ ಬೆಳೆ ನೀರಲ್ಲಿ ಕೊಚ್ಚಿ ಹೋದ ಪರಿಣಾಮ ಬೆಳೆಗಾರರಿಗೆ ಭರ್ಜರಿ ನಷ್ಟ ಉಂಟಾಗಿದೆ. ಚಿಕ್ಕಮಗಳೂರು, ಕೊಪ್ಪ, ಮೂಡಿಗೆರೆ , ಕಳಸ, ಶೃಂಗೇರಿ, NR ಪುರ ಭಾಗದಲ್ಲಿ ಉತ್ತಮ ಮಳೆ ಸುರಿದಿದೆ.

ಚಿಕ್ಕಮಗಳೂರು, ಜನವರಿ 13: ಕಾಫಿನಾಡು ಚಿಕ್ಕಮಗಳೂರಲ್ಲಿ ಈ‌ ವರ್ಷದ ಮೊದಲ ‌ಮಳೆಯ ಸಿಂಚನವಾಗಿದೆ. ಚಿಕ್ಕಮಗಳೂರು, ಕೊಪ್ಪ, ಮೂಡಿಗೆರೆ , ಕಳಸ, ಶೃಂಗೇರಿ, NR ಪುರ ಭಾಗದಲ್ಲಿ ವರುಣ ಅಬ್ಬರಿಸಿದ್ದು, ದಿಢೀರ್ ಸುರಿದ ಮಳೆಯಿಂದ ಜನರು ಕಂಗಾಲಾದ ಪ್ರಸಂಗ ನಡೆದಿದೆ. ಕಳೆದ ಒಂದು ವಾದದಿಂದ ಕೊರೆಯುವ ಚಳಿ, ಶೀತ ಗಾಳಿಗೆ ಜಿಲ್ಲೆಯ ಜನರು ಹೈರಾಣಾಗಿರುವ ನಡುವೆ ಧಾರಾಕಾರವಾಗಿ ಸುರಿದ ಮಳೆ ಕಾಫಿ ಬೆಳೆಗಾರರನ್ನ ಆತಂಕಕ್ಕೆ ದೂಡಿದೆ. ಜಿಲ್ಲೆಯಾದ್ಯಂತ ಕಾಫಿ ಫಸಲಿನ ಕೊಯ್ಲು ನಡೆಯುತ್ತಿದ್ದು, ಒಣ‌ ಹಾಕಿದ ಕಾಫಿ ಮಳೆಯಿಂದ ಸಂಪೂರ್ಣ ನೆನೆದು ಹಾಳಾಗಿದೆ. ಕೆಲವೆಡೆ ಬೆಳೆ ನೀರಲ್ಲಿ ಕೊಚ್ಚಿ ಹೋಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.