Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ

Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ

ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: ಆಯೇಷಾ ಬಾನು

Updated on: Jul 27, 2024 | 8:18 AM

ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯ ಚಾರ್ಮಾಡಿಘಾಟ್‌ನ 10ನೇ ತಿರುವಿನಲ್ಲಿ ನಿನ್ನೆ ರಾತ್ರಿ ಗುಡ್ಡ ಕುಸಿದಿತ್ತು. ಹೀಗಾಗಿ ಕೊಟ್ಟಿಗೆಹಾರವರೆಗೂ ಭಾರಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಚಿಕ್ಕಮಗಳೂರಿನ ಕೊಟ್ಟಿಗೆಹಾರದಲ್ಲೇ ವಾಹನಗಳನ್ನು ತಡೆದು ಪೊಲೀಸರು ವಾಪಸ್ ಕಳಿಸಿದ್ರು. ಅತ್ತ ಉಜಿರೆ ಬಳಿಯೂ ಚಾರ್ಮಾಡಿ ಘಾಟ್ ಪ್ರವೇಶ ನಿರ್ಬಂಧಿಸಲಾಗಿತ್ತು.

ಭಾರಿ ಮಳೆಯಿಂದ ಚಾರ್ಮಾಡಿ ಘಾಟ್‌ನಲ್ಲಿ ಗುಡ್ಡ ಕುಸಿದು ಟ್ರಾಫಿಕ್ ಜಾಮ್ ಉಂಟಾಗಿದ್ದ ಘಟನೆ ತಡ ರಾತ್ರಿ ಸಂಭವಿಸಿದೆ. ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯ 10ನೇ ತಿರುವಿನಲ್ಲಿ ಗುಡ್ಡ ಕುಸಿದಿದ್ದು ಚಾರ್ಮಾಡಿ ಘಾಟ್​ನಿಂದ ಕೊಟ್ಟಿಗೆಹಾರದವರೆಗೂ ವಾಹನಗಳು ನಿಂತಲ್ಲೇ ನಿಂತಿದ್ದವು. ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯಾಚರಣೆ ನಡೆಸಲಾಯ್ತು. ಮಂಗಳೂರಿಗೆ ತೆರಳುವವರನ್ನು ಪೊಲೀಸರು ಕೊಟ್ಟಿಗೆಹಾರದಲ್ಲೇ ತಡೆದು ವಾಪಸ್ ಕಳಿಸಿದ್ದಾರೆ.

ಉಕ್ಕಿ ಹರಿಯುತ್ತಿದೆ ಕಾವೇರಿ.. ದೇವಾಲಯಗಳು ಜಲ ದಿಗ್ಬಂಧನ

ಕೆಆರ್‌ಎಸ್‌ನಿಂದ 90 ಸಾವಿರ ಕ್ಯೂಸೆಕ್ ನೀರು ಹೊರಬಿಡಲಾಗಿದೆ. ಶ್ರೀರಂಗಪಟ್ಟಣದ ಕೋಟೆ ಗಣಪತಿ ದೇಗುಲ ಮುಳುಗಡೆಯಾಗಿದೆ. ಇನ್ನು ಗಂಜಾಂನಲ್ಲಿರುವ ನಿಮಿಷಾಂಬ ದೇಗುಲ ಸ್ನಾನಘಟ್ಟ ಜಲಾವೃತವಾಗಿದೆ. ರಂಗನಾಥ ಸ್ವಾಮಿ, ಪಶ್ಚಿಮ ವಾಹಿನಿ ಸ್ನಾನಘಟ್ಟಗಳು ಮುಳುಗಿದ್ದು ಭಕ್ತರಿಗೆ ನಿರ್ಬಂಧ ಹೇರಲಾಗಿದೆ.
ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ