Video: ಹಿಮಾಚಲ ಪ್ರದೇಶದಲ್ಲಿ ಪ್ರವಾಹ, 10 ಜಿಲ್ಲೆಗಳಿಗೆ ರೆಡ್ ಅಲರ್ಟ್​

Updated on: Jul 01, 2025 | 7:45 AM

ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ದೊಡ್ಡ ದೊಡ್ಡ ನೀರಿನಲ್ಲಿ ಕೊಚ್ಚಿ ಹೋಗಿದ್ದು, 10 ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ಸೋಮವಾರ ರಾತ್ರಿ ಇಡೀ ಸುರಿದ ಧಾರಾಕಾರ ಮಳೆಗೆ ಬಿಯಾಸ್ ನದಿ ಉಕ್ಕಿ ಹರಿಯುತ್ತಿದೆ. ಕರ್ಸೋಗ್, ಧರಂಪುರ, ಪಾಂಡೋಹ್ ಮತ್ತು ತುನಾಗ್ ಪ್ರದೇಶದಲ್ಲಿ ಪ್ರವಾಹ ಉಂಟಾಗಿದೆ. ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆ ಹೆಚ್ಚು ಹಾನಿಗೊಳಗಾಗಿದೆ. ಉಕ್ಕಿ ಹರಿಯುವ ಹೊಳೆಗಳು ಮತ್ತು ನದಿಗಳು ಪ್ರದೇಶಗಳಿಗೆ ನುಗ್ಗಿ ಮನೆಗಳು ಮತ್ತು ರಸ್ತೆಗಳಿಗೆ ಹಾನಿಯುಂಟುಮಾಡಿವೆ

ಶಿಮ್ಲಾ, ಜುಲೈ 01: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ದೊಡ್ಡ ದೊಡ್ಡ ನೀರಿನಲ್ಲಿ ಕೊಚ್ಚಿ ಹೋಗಿದ್ದು, 10 ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ಸೋಮವಾರ ರಾತ್ರಿ ಇಡೀ ಸುರಿದ ಧಾರಾಕಾರ ಮಳೆಗೆ ಬಿಯಾಸ್ ನದಿ ಉಕ್ಕಿ ಹರಿಯುತ್ತಿದೆ. ಕರ್ಸೋಗ್, ಧರಂಪುರ, ಪಾಂಡೋಹ್ ಮತ್ತು ತುನಾಗ್ ಪ್ರದೇಶದಲ್ಲಿ ಪ್ರವಾಹ ಉಂಟಾಗಿದೆ. ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆ ಹೆಚ್ಚು ಹಾನಿಗೊಳಗಾಗಿದೆ. ಉಕ್ಕಿ ಹರಿಯುವ ಹೊಳೆಗಳು ಮತ್ತು ನದಿಗಳು ಪ್ರದೇಶಗಳಿಗೆ ನುಗ್ಗಿ ಮನೆಗಳು ಮತ್ತು ರಸ್ತೆಗಳಿಗೆ ಹಾನಿಯುಂಟುಮಾಡಿವೆ.

ಧರಂಪುರ್‌ನಲ್ಲಿ ನದಿಯು ಸಾಮಾನ್ಯ ಮಟ್ಟಕ್ಕಿಂತ ಸುಮಾರು 20 ಅಡಿಗಳಷ್ಟು ಉಕ್ಕಿ ಹರಿದಿದೆ. ಶಿಮ್ಲಾ ಬಳಿಯ ಭಟ್ಟಾಕುಫರ್‌ನಲ್ಲಿ, ಐದು ಅಂತಸ್ತಿನ ಕಟ್ಟಡವೊಂದು ಕುಸಿದಿತ್ತು. ಹಿಮಾಚಲ ಪ್ರದೇಶದ ಮಂಡಿ, ಶಿಮ್ಲಾ, ಕಾಂಗ್ರಾ, ಬಿಲಾಸ್ಪುರ್, ಸೋಲನ್, ಸಿರ್ಮೌರ್, ಹಮೀರ್ಪುರ್, ಉನಾ, ಕುಲ್ಲು ಮತ್ತು ಚಂಬಾ ಸೇರಿದಂತೆ 10 ಜಿಲ್ಲೆಗಳಿಗೆ ಐಎಂಡಿ ರೆಡ್ ಅಲರ್ಟ್ ನೀಡಿದೆ.

ಮುಂದಿನ 24 ರಿಂದ 48 ಗಂಟೆಗಳಲ್ಲಿ ಈ ಪ್ರದೇಶಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ಹಠಾತ್ ಪ್ರವಾಹ, ಭೂಕುಸಿತ ಮತ್ತು ಮೂಲಸೌಕರ್ಯ ಕುಸಿತದ ಅಪಾಯ ಹೆಚ್ಚಿದೆ. ಧರ್ಮಶಾಲಾ, ಕುಲ್ಲು ಮತ್ತು ಸೋಲನ್‌ಗಳಲ್ಲಿ ಆರೆಂಜ್ ಅಲರ್ಟ್​ ನೀಡಲಾಗಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ